ADVERTISEMENT

ಕುಕನೂರು: ಡಿ.ಕೆ.ಸುರೇಶ್‌ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 11:23 IST
Last Updated 5 ಜನವರಿ 2022, 11:23 IST
ಕುಕನೂರಿನ ವೀರಭದ್ರಪ್ಪ ವೃತ್ ದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ರಾಮನಗರದಲ್ಲಿ ನಡೆದ ಸಂಸದ ಡಿ.ಕೆ ಸುರೇಶ ಅವರ ವರ್ತನೆ ಖಂಡಿಸಿ ಪ್ರತಿಭಟನೆ ನಡೆಸಿದರು
ಕುಕನೂರಿನ ವೀರಭದ್ರಪ್ಪ ವೃತ್ ದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ರಾಮನಗರದಲ್ಲಿ ನಡೆದ ಸಂಸದ ಡಿ.ಕೆ ಸುರೇಶ ಅವರ ವರ್ತನೆ ಖಂಡಿಸಿ ಪ್ರತಿಭಟನೆ ನಡೆಸಿದರು   

ಕುಕನೂರು: ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೂಂಡಾ ವರ್ತನೆ ತೋರಿದ ಸಂಸದ ಡಿ.ಕೆ.ಸುರೇಶ್‌ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಡಿ.ಕೆ. ಸುರೇಶ್‌ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ರಾಮನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ರೌಡಿಗಳಂತೆ ವರ್ತಿಸಿದ್ದು ಖಂಡನೀಯ. ಇದು ಈ ರಾಜ್ಯದ ಸಿಎಂಗೆ ಮಾಡಿದ ಅವಮಾನವಾಗಿದೆ ಎಂದರು.

ಪ್ರತಿಯೊಂದಕ್ಕೂ ಬಿಜೆಪಿಯನ್ನು ಟೀಕಿಸುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್‌ ಅವರು ತಮ್ಮ ಸಹೋದರನ ಬೆಂಬಲಕ್ಕೆ ನಿಂತು, ಅವರ ನಡೆತೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಈ ಕೂಡಲೇ ಮುಖ್ಯಮಂತ್ರಿ ಅವರ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಡಿ.ಕೆ ಬ್ರದರ್ಸ್ ಈ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷ ಪ್ರಭುಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಕಲ್ಲಪ್ಪ ಕರಮುಡಿ, ನಗರ ಘಟಕದ ಅಧ್ಯಕ್ಷ ಬಸವರಾಜ ಹಾಳಕೇರಿ, ಸಿದ್ದು ಉಳ್ಳಾಗಡ್ಡಿ, ಮಲ್ಲು ಚೌಧರಿ, ಮಹಾಂತೇಶ ಹೂಗಾರ, ಗಂಗಾಧರ ನಾರಾಯಣಿ, ರಾಮನಗೌಡ, ವೀರೇಶ ಸಬರದ, ಕಾಳಿ ಮಂಜು, ಪಕ್ಕಪ್ಪ ಸಾಲ್ಮನಿ, ಲಕ್ಷ್ಮಣ ಸಾಲ್ಮನಿ, ಚಂದ್ರು ಬಗನಾಳ, ಶಶಿ ಭಜೆಂತ್ರಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.