ADVERTISEMENT

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 4:15 IST
Last Updated 28 ನವೆಂಬರ್ 2022, 4:15 IST
ಕೊಪ್ಪಳದಲ್ಲಿ ಶನಿವಾರ ರೈತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು
ಕೊಪ್ಪಳದಲ್ಲಿ ಶನಿವಾರ ರೈತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು   

ಕೊಪ್ಪಳ: ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ರೈತ ಸಂಘಟನೆಗಳ ಸಮನ್ವಯ ಸಮಿತಿ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿತು.

ಕೃಷಿಯಲ್ಲಿ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳ ಆಧಾರವಾಗಿ ಬೆಳೆಗಳಿಗೆ ಲಾಭದಾಯಕ ಬೆಲೆ ನೀಡಬೇಕು, ಲಖಿಂಪುರ ಖೇರಿ ಜಿಲ್ಲೆಯ ಟಿಕೋನಿಯಾದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತನ ಹತ್ಯೆಯ ಪ್ರಮುಖ ಸಂಚುಕೋರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಅನಾವೃಷ್ಟಿ, ಅತಿವೃಷ್ಟಿ, ಬೆಳೆಗೆ ಸಂಬಂಧಿಸಿದ ರೋಗಗಳು ಸೂಕ್ತ ಪರಿಹಾರ ಕೊಡಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಮುಖಂಡರಾದ ಡಿ.ಎಚ್.ಪೂಜಾರ, ಬಸವರಾಜ ಶೀಲವಂತರ, ಭೀಮಸೇನ ಕಲಕೇರಿ, ಹನುಮನಗೌಡ, ಬಸವರಾಜ ನರೇಗಲ್, ಪಾಮಪ್ಪ ಮಲ್ಲಪೂರ, ನಿರಪಾದಿ ಬುನ್ನಟ್ಟಿ, ಸಿದ್ಧಲಿಂಗಪ್ಪ ಕೊಪ್ಪಳ, ಮಲ್ಲಪ್ಪ ಕುಣಕೇರಿ, ರಾಜಪ್ಪ ದೇವಲಾಪೂರ, ರಾಮಪ್ಪ , ಯಮನೂರಪ್ಪ, ಲಕ್ಷ್ಮಣ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.