ADVERTISEMENT

ಗಂಗಾವತಿ: ಭಾರಿ ವಾಹನ ಸಂಚಾರ ನಿಷೇಧಕ್ಕೆ ಮನವಿ

ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆಯ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2019, 11:29 IST
Last Updated 30 ಅಕ್ಟೋಬರ್ 2019, 11:29 IST
ಗಂಗಾವತಿಯ ಸೇವಾಲಾಲ್ ವೃತ್ತದಲ್ಲಿ ಬುಧವಾರ ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಗಂಗಾವತಿಯ ಸೇವಾಲಾಲ್ ವೃತ್ತದಲ್ಲಿ ಬುಧವಾರ ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು   

ಗಂಗಾವತಿ: ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಎಚ್.ಜಿ.ರಾಮುಲು ಮನೆಯಿಂದ ಸಾಯಿಬಾಬಾ ದೇವಸ್ಥಾನದವರೆಗೂ ರಸ್ತೆ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆಯು ಬುಧವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ ವಿ.ಎಚ್.ಹೊರಪೇಟೆ ಅವರಿಗೆ ಮನವಿ ಸಲ್ಲಿಸಿತು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಲಕ್ಷ್ಮಣ ನಾಯ್ಕ ಮಾತನಾಡಿ, ನಗರದ ಎಚ್.ಜಿ.ರಾಮುಲು ಅವರ ಮನೆಯಿಂದ ಸಾಯಿಬಾಬಾ ದೇವಸ್ಥಾನದವರೆಗೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ಈ ರಸ್ತೆಯ ಮೇಲೆ ಇತ್ತಿಚೆಗೆ ಭಾರಿ ವಾಹನಗಳ ಓಡಾಟ ಹೆಚ್ಚಾಗಿ, ರಸ್ತೆಯು ಸಂಪೂರ್ಣ ಹದಗೆಟ್ಟಿದೆ ಎಂದರು.

ರಸ್ತೆ ಕಿರಿದಾಗಿರುವುದರಿಂದ ಅಪಘಾತಗಳು ಹೆಚ್ಚಿವೆ. ರಸ್ತೆಯಲ್ಲಿನ ಧೂಳು ಸಹ ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳನ್ನು ಹೈರಾಣಾಗಿಸಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆ ಮೇಲೆ ಓಡಾಡುವ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಬೇಕು. ರಸ್ತೆಯನ್ನು ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಇದಕ್ಕೂ ಮುನ್ನ ನಗರದ ಸೇವಾಲಾಲ್ ವೃತ್ತದಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿಲಾಯಿತು. ಪ್ರತಿಭಟನೆಗೆ ಬೇತೆಲ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದರು.

ಈ ವೇಳೆ ಸಂಘಟನೆಯ ಪದಾಧಿಕಾರಿಗಳಾದ ಹನುಮಂತ, ಗಾಳೆಪ್ಪ, ಪ್ರಕಾಶ, ರಾಮು, ಮಂಜು ನಾಯಕ, ಶಿವಪ್ಪ, ವೆಂಕಟೇಶ್ ಜಾಧವ, ಕೃಷ್ಣ, ರವಿ ಚೌಹಾಣ್, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.