ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಅಶೋಕ ವೃತ್ತದಲ್ಲಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ‘ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ, ರಾಜ್ಯ ಯುವ ಘಟಕದ ಕಾರ್ಯಧ್ಯಕ್ಷ ರಾಜು ನಾಯಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ವೀರೇಶ ಮಹಾಂತಯ್ಯಮಠ ಸೇರಿದಂತೆ ಎಲ್ಲ ಪದಾಧಿಕಾರಿಗಳು ಪಾಲ್ಗೊಳ್ಳುವರು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.