ADVERTISEMENT

ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 6:44 IST
Last Updated 26 ನವೆಂಬರ್ 2025, 6:44 IST
ಕೊಪ್ಪಳದಲ್ಲಿ ಮಂಗಳವಾರ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು
ಕೊಪ್ಪಳದಲ್ಲಿ ಮಂಗಳವಾರ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು   

ಕೊಪ್ಪಳ: ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನವೀಕರಣ ಕಾಲಾವಧಿ ಒಂದು ವರ್ಷಕ್ಕೆ ತರಲಾಗಿದೆ. ಸರ್ಕಾರದಲ್ಲಿ ಸೇವೆ ಸಲ್ಲಿಸುವ ನೌಕರರು ಸರ್ಕಾರಕ್ಕೆ ಸಕಾಲಕ್ಕೆ ತಮ್ಮ ದಾಖಲೆಗಳನ್ನು ಒದಗಿಸಲು ವಿಳಂಬವಾಗುತ್ತಿದೆ ಎಂದು ಪದಾಧಿಕಾರಿಗಳು ಹೇಳಿದರು.

ಒಳ ರೋಗಿಯಾಗಿ ಸೇರಿಸಿಕೊಂಡು ಚಿಕಿತ್ಸೆ ನೀಡಿ ಮಂಡಳಿಯಿಂದ ಬರುವ ಹಣ ಪಡೆಯುವಂತೆ ಸುತ್ತೋಲೆ ಹೊರಡಿಸಬೇಕು. ಜಿಲ್ಲೆಯಲ್ಲಿ ವ್ಯಾಪಕವಾಗಿರುವ ನಕಲಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳನ್ನು ತಕ್ಷಣ ರದ್ದುಪಡಿಸಿ ನೈಜ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘಟನೆಯ ಜಿಲ್ಲಾ ಘಟಕದ ಪ್ರಧಾನ ಸಂಚಾಲಕ ಬಸವರಾಜ ಶೀಲವಂತರ, ಸಂಚಾಲಕ ಎಸ್.ಎ.ಗಫಾರ್‌, ಮುಖಂಡರಾದ ಪಾನಿಷಾ ಮಕಾನದಾರ್‌, ಸಂಶುದ್ದೀನ್ ಮಕನದಾರ್‌, ಗಾಳೆಪ್ಪ ಪೂಜಾರ ಲೇಬಗೇರಿ, ಮಖಬೂಲ್ ರಾಯಚೂರ ಸೇರಿ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.