ADVERTISEMENT

ಕೋಡಿಹಳ್ಳಿ ಚಂದ್ರಶೇಖರ್‌ ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಮೇ 2022, 13:00 IST
Last Updated 29 ಮೇ 2022, 13:00 IST
ಗಂಗಾವತಿ ನಗರದ ಕೃಷ್ಣದೇವರಾಯ ವೃತ್ತದಲ್ಲಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ಗಂಗಾವತಿ ನಗರದ ಕೃಷ್ಣದೇವರಾಯ ವೃತ್ತದಲ್ಲಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು   

ಗಂಗಾವತಿ: ‘ಲಂಚ ಪಡೆದು ಸಾರಿಗೆ ಇಲಾಖೆ ನೌಕರರ ಮುಷ್ಕರ ನಡೆಯದಂತೆ ನೋಡಿಕೊಂಡಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಪದಾಧಿಕಾರಿಗಳು ಇಲ್ಲಿನ ಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂಘಟನೆ ಮುಖ್ಯಸ್ಥ ಎ.ಹುಲಗಪ್ಪ ಮಾತನಾಡಿ,‘ಸಾರಿಗೆ ಇಲಾಖೆಯ 1 ಲಕ್ಷಕ್ಕೂ ಅಧಿಕ ಸಿಬ್ಬಂದಿ 4 ದಿನ ಬಸ್‌ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದ್ದರು. ಮುಷ್ಕರದ ನೇತೃತ್ವ ವಹಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರು ರಾಜ್ಯ ಸರ್ಕಾರದ ಜತೆಗೆ ಶಾಮೀಲಾಗಿ ₹30 ಕೋಟಿ ಪಡೆದು ಪ್ರತಿಭಟನೆ ನಡೆಯದಂತೆ ನೋಡಿಕೊಂಡಿದ್ದಾರೆ’ ಎಂದು ಆರೋಪಿಸಿದರು.

ಕೂಡಲೇ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಭ್ರಷ್ಟಾಚಾರ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಪಕ್ಷದ ಕಾರ್ಯಕರ್ತರಾದ ಎ.ಎಲ್.ತಿಮ್ಮಣ್ಣ, ಪರಶುರಾಮ, ಲಕ್ಷ್ಮಣ, ಕರಿಯಪ್ಪ, ಯಮನೂರಪ್ಪ, ಹನುಮಂತಪ್ಪ, ಶಂಕ್ರಪ್ಪ, ರಾಘವೇಂದ್ರ ಹಾಗೂ ಶೇಖಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.