ADVERTISEMENT

ದಯಾನಂದ ಅಮಾನತು ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 14:33 IST
Last Updated 10 ಜೂನ್ 2025, 14:33 IST
ಮಾನ್ವಿಯಲ್ಲಿ ಮಂಗಳವಾರ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ‌ ಮಹಾಸಭಾದ ಯುವ ಘಟಕದ ಸದಸ್ಯರು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು
ಮಾನ್ವಿಯಲ್ಲಿ ಮಂಗಳವಾರ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ‌ ಮಹಾಸಭಾದ ಯುವ ಘಟಕದ ಸದಸ್ಯರು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು   

ಮಾನ್ವಿ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತು ವಿರೋಧಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಸದಸ್ಯರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು, ನಂತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅಬ್ದುಲ್ ವಾಹೀದ್ ಅವರಿಗೆ ಸಲ್ಲಿಸಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಕ್ರಿಕೆಟ್ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಜನರ ಸಾವಿಗೀಡಾದ ಪ್ರಕರಣಕ್ಕೆ
ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಬಿ.ದಯಾನಂದ ಅವರನ್ನು ಅಮಾನತು ಮಾಡಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ದಯಾನಂದ ಅವರನ್ನು ಬಲಿಪಶು ಮಾಡಲಾಗಿದೆ. ಅದ್ದರಿಂದ ರಾಜ್ಯ ಸರ್ಕಾರ ಕೂಡಲೇ ಅಮಾನತ ಅದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶರಣಬಸವ ನಾಯಕ ಜಾನೇಕಲ್, ಇತರ ಪದಾಧಿಕಾರಿಗಳಾದ ಬುಡ್ಡಪ್ಪ‌ ನಾಯಕ, ಬಸವರಾಜ ನಾಯಕ, ವೀರೇಶ ನಾಯಕ, ಶ್ರೀರಾಮ ನಾಯಕ, ಜಲ್ಲಿ ಆಂಜನೇಯ ನಾಯಕ, ಬಿ.ಶಿವರಾಜ ನಾಯಕ ಹರವಿ, ಅಂಬಣ್ಣ ನಾಯಕ, ಭೀಮಣ್ಣ ನಾಯಕ, ಶರಣಬಸವ ನಾಯಕ, ಸುದೀಪ ನಾಯಕ, ಚನ್ನಬಸವನಾಯಕ, ಲಿಂಗಪ್ಪ ಕರೆಗುಡ್ಡ, ಮಹೇಂದ್ರ ನಾಯಕ, ಗುರುರಾಜ ನಾಯಕ, ಆಂಜಿ ನಾಯಕ, ವೆಂಕಿ ನಾಯಕ, ಮಂಜುನಾಥ ನಾಯಕ, ದೇವರಾಜು, ಕೃಷ್ಣನಾಯಕ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.