ADVERTISEMENT

ಆರೋಪ ಸಾಬೀತು; ಆರು ತಿಂಗಳು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:55 IST
Last Updated 7 ಆಗಸ್ಟ್ 2022, 7:55 IST

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಬುಡುಕುಂಟಿ ಕ್ರಾಸ್‌ ಬಳಿ ವಾಹನವೊಂದರಲ್ಲಿ ಮಾದಕ ವಸ್ತು ಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದಪಂಜಾಬ್‌ನ ಮೋಹಿತ್‌ ಶರ್ಮಾ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

2020ರ ಫೆಬ್ರುವರಿಯಲ್ಲಿ ಈ ಘಟನೆ ನಡೆದಿತ್ತು. ಕೊಪ್ಪಳ ಅಬಕಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್‌. ರೇಖಾ ಅವರು ಈ ತೀರ್ಪು ನೀಡಿದ್ದಾರೆ. ಕುಷ್ಟಗಿ ಅಬಕಾರಿ ನಿರೀಕ್ಷಕ ಚಾಂದಪಾಷ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT