ADVERTISEMENT

ಪ್ರಚೋದನಕಾರಿ ಘೋಷಣೆ: ಎಸ್‌ಡಿಪಿಐ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 7 ಮೇ 2025, 4:28 IST
Last Updated 7 ಮೇ 2025, 4:28 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಕೊಪ್ಪಳ: ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಎರಡು ದಿನಗಳ ಹಿಂದೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ಪ್ರಚೋದನಕಾರಿಯಾಗಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಎಸ್‌ಡಿಪಿಐ ಕಾರ್ಯದರ್ಶಿ ಹರ್ಷದ್‌ ವಿರುದ್ಧ ಇಲ್ಲಿನ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಗಡಿಯಾರ ಕಂಬದಿಂದ ಆರಂಭವಾಗಿದ್ದ ಮೆರವಣಿಗೆ ಕುರುಗೋಡು ಸ್ಟುಡಿಯೊ ಬಳಿ ಬಂದಾಗ ಹರ್ಷದ್‌, ‘ಮೋದಿ, ಅಮಿತ್‌ ಶಾ ವಿರುದ್ಧ, ಆರ್‌ಎಸ್‌ಎಸ್, ಹಿಂದುತ್ವಪರ ಸಂಘಟನೆಗಳ ವಿರುದ್ಧ ಪ್ರಚೋದನಕಾರಿಯಾಗಿ ಘೋಷಣೆ ಕೂಗಿ ಸ್ಥಳದಲ್ಲಿದ್ದ ವಿವಿಧ ಜನಾಂಗದ ಜನರಲ್ಲಿ ದ್ವೇಷ ಹಾಗೂ ವೈಮನಸ್ಸಿನ ಭಾವನೆ ಉಂಟು ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಕೇಡಿಗೆ ಕಾರಣವಾಗುವ ಪ್ರಚೋದನಕಾರಿ ಹೇಳಿಕೆಯನ್ನು ಪ್ರತಿಭಟನಾ ಮೆರವಣಿಗೆ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಕೂಗಿ ನಗರದ ಹಿಂದೂ ಹಾಗೂ ಸಂಘ ಪರಿವಾರದ ಯುವಜನರಲ್ಲಿ ವೈಮನಸ್ಸು ಮೂಡುವಂತೆ ಮಾಡಿದ್ದಾರೆ. ಆ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಧಕ್ಕೆ ತಂದಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.