ADVERTISEMENT

ಪಿಎಸ್‌ಐ ಹಗರಣ| 12ರೊಳಗೆ ದಢೇಸೂಗೂರು ಬಂಧಿಸದಿದ್ದರೆ ಪಾದಯಾತ್ರೆ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:22 IST
Last Updated 8 ಸೆಪ್ಟೆಂಬರ್ 2022, 19:22 IST
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ   

ಕೊಪ್ಪಳ: ‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಹೆಸರು ಕೇಳಿ ಬಂದಿದ್ದು, ಅವರನ್ನು ಸೆಪ್ಟೆಂಬರ್ 12ರೊಳಗೆ ಸರ್ಕಾರ ಬಂಧಿಸಬೇಕು. ಇಲ್ಲದಿದ್ದರೆ, ಕನಕಗಿರಿ ಕ್ಷೇತ್ರದಿಂದ ಪಾದಯಾತ್ರೆ ಮಾಡಲಾಗುವುದು’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.

ಕನಕಗಿರಿ ಕ್ಷೇತ್ರದ ಮಾಜಿ ಶಾಸಕರೂ ಆದ ತಂಗಡಗಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಆಡಿಯೊದಲ್ಲಿರುವ ಧ್ವನಿ ತಮ್ಮದೇ ಎಂದು ಶಾಸಕರೇ ಒಪ್ಪಿದ್ದಾರೆ. ಪರಸಪ್ಪ ಎಂಬುವವರು ಮಗನ ಪಿಎಸ್ಐ ನೇಮಕಾತಿಗೆ ₹15 ಲಕ್ಷ ಕೊಟ್ಟಿರುವುದಾಗಿ ಹೇಳಿದ್ದಾರೆ. ಇಷ್ಟೆಲ್ಲಾ ದಾಖಲೆಗಳು ಇದ್ದರೂ ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ’ ಎಂದರು.

‘ಪಿಎಸ್‌ಐ ಹಗರಣದ ಬಗ್ಗೆ ಮಾತನಾಡಿದ್ದಕ್ಕೆ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ನೋಟಿಸ್‌ ನೀಡಲಾಗಿತ್ತು. ಸರ್ಕಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ನಾಯಕರು ಈ ವಿಷಯ ಪ್ರಸ್ತಾಪಿಸುವರು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.