ADVERTISEMENT

ಪಿಯು ಫಲಿತಾಂಶ: ಕೊಪ್ಪಳದಲ್ಲಿ ಪರೀಕ್ಷೆ ಬರೆದ ಎಲ್ಲರೂ ಪಾಸ್

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 6:33 IST
Last Updated 21 ಜುಲೈ 2021, 6:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಪ್ಪಳ: ಜಿಲ್ಲೆಯ ಪದವಿಪೂರ್ವ ಪರೀಕ್ಷೆಯಲ್ಲಿ ಹೆಸರು ನೋಂದಾಯಿಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಡಿಡಿಪಿಯು ಡಿ.ಬಿ.ಗಡೇದ ತಿಳಿಸಿದ್ದಾರೆ.

ಜಿಲ್ಲೆಯ ಫಲಿತಾಂಶ ಶೇ 100ರಷ್ಟು ಇದ್ದು, 12305 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಶೇ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಮಾಹಿತಿ ಪಡೆಯಲು ತಾಂತ್ರಿಕ ಕಾರಣದಿಂದ ತೊಂದರೆಯಾಗಿದ್ದು, ಬುಧವಾರ ಸಮಗ್ರ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.

ಕಲಾ, ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸುಧಾರಣೆ ಕಂಡು ಬಂದಿದ್ದು, ರೆಗ್ಯೂಲರ್‌ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ 60ರಷ್ಟು ಸುಧಾರಣೆ ಕಂಡು ಬಂದಿದೆ.

ADVERTISEMENT

ಗ್ರೇಡ್‌ ಆಧಾರದ ಮೇಲೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ತಯಾರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.