ADVERTISEMENT

ಅಳವಂಡಿ | ಸುರಿಯುತ್ತಿರುವ ಪುನರ್ವಸು ಮಳೆ: ಸಂತಸಗೊಂಡ ರೈತಾಪಿ ವರ್ಗ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 6:37 IST
Last Updated 19 ಜುಲೈ 2025, 6:37 IST
ಅಳವಂಡಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಳೆಯಾಯಿತು
ಅಳವಂಡಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಳೆಯಾಯಿತು   

ಅಳವಂಡಿ: ವಲಯದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಸುರಿದ ಮಳೆಯಿಂದ ರೈತಾಪಿ ವರ್ಗದಲ್ಲಿ ಖುಷಿ ತಂದಿದೆ.

ಪ್ರಸಕ್ತ ವರ್ಷ ಮುಂಗಾರು ಪೂರ್ವ ಮಳೆ ಪ್ರಾರಂಭದಲ್ಲಿ ಚೆನ್ನಾಗಿ ಸುರಿದಿದ್ದರಿಂದ ರೈತರು ಖುಷಿಯಿಂದ ಬಿತ್ತನೆ ಕಾರ್ಯ ನಡೆಸಿದ್ದರು. ಬಳಿಕ ಸರಿಯಾದ ಸಮಯಕ್ಕೆ ಮಳೆಯಾಗದ್ದರಿಂದ ಮೆಕ್ಕೆಜೋಳ, ಹೆಸರು, ಸೂರ್ಯಕಾಂತಿ, ತೊಗರಿ ಮುಂತಾದ ಬೆಳೆಗಳು ಒಣಗಲು ಆರಂಭಿಸಿದ್ದವು. ಶುಕ್ರವಾರ ಬಿದ್ದ ಮಳೆ ರೈತರಲ್ಲಿ ಆಶಾಭಾವ ಮೂಡಿಸಿದೆ.

ವಲಯದ ಬಹುತೇಕ ಗ್ರಾಮಗಳಲ್ಲಿ ಪುನರ್ವಸು ಮಳೆ ಗುರುವಾರದಿಂದ ಸುರಿಯುತ್ತಿದೆ. ಬಾಡುತ್ತಿದ್ದ ಬೆಳೆಗೆ ಜೀವಕಳೆ ಬಂದಿದೆ. ಶುಕ್ರವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಜಡಿ ಮಳೆ ಸಂಜೆಯವರೆಗೂ ಮುಂದುವರಿದಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.