ADVERTISEMENT

ಯಲಬುರ್ಗಾ: ಸಂಭ್ರಮದ ಪುರಾಣ ಮಂಗಲೋತ್ಸವ, ದೇವಿಮೂರ್ತಿಯ ಅಂಬಾರಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 6:50 IST
Last Updated 20 ಅಕ್ಟೋಬರ್ 2021, 6:50 IST
ಯಲಬುರ್ಗಾ ಪಟ್ಟಣದ ವಿಜಯದುರ್ಗಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಹಮ್ಮಿಕೊಂಡಿದ್ದ ಪುರಾಣ ಮಂಗಲೋತ್ಸವ ಆಚರಣೆಯ ಅಂಬಾರಿ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಬಸವಲಿಂಗೇಶ್ವರ ಸ್ವಾಮೀಜಿ ಮತ್ತು ಗಣ್ಯರು ಭಾಗವಹಿಸಿದ್ದರು
ಯಲಬುರ್ಗಾ ಪಟ್ಟಣದ ವಿಜಯದುರ್ಗಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಹಮ್ಮಿಕೊಂಡಿದ್ದ ಪುರಾಣ ಮಂಗಲೋತ್ಸವ ಆಚರಣೆಯ ಅಂಬಾರಿ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಬಸವಲಿಂಗೇಶ್ವರ ಸ್ವಾಮೀಜಿ ಮತ್ತು ಗಣ್ಯರು ಭಾಗವಹಿಸಿದ್ದರು   

ಯಲಬುರ್ಗಾ: ಪಟ್ಟಣದ ವಿಜಯ ದುರ್ಗಾದೇವಿ ದೇವಸ್ಥಾನದಲ್ಲಿಶರನ್ನವರಾತ್ರಿ ಅಂಗವಾಗಿ ಹಮ್ಮಿಕೊಂಡಿದ್ದ ದೇವಿಪುರಾಣ ಮಹಾಮಂಗಲದ ಪ್ರಯುಕ್ತ ಅಂಬಾರಿ ಮೆರವಣಿಗೆ, ಕುಂಭೋತ್ಸವ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಂಗಳವಾರ ಬೆಳಿಗ್ಗೆ ದೇವಿಯ ಮೂರ್ತಿಗೆ ವಿಶೇಷ ಪೂಜೆ ನಡೆದವು. ನಂತರ ಅಂಬಾರಿ ಮೆರವಣಿಗೆಯು ಪಟ್ಟಣದ ವಿವಿಧ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು. ವಿವಿಧ ವಾಧ್ಯ ಮೇಳದೊಂದಿಗೆ ಸಾಕಷ್ಟು ಸಂಖ್ಯೆಯ ಮಹಿಳೆಯರು ಕುಂಭಗಳೊಂದಿಗೆ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಶ್ರೀಧರ ಮುರಡಿ ಹಿರೇಮಠದ ಪೀಠಾಧಿಕಾರಿ ಬಸವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ADVERTISEMENT

ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ಕಳೆದ 2 ವರ್ಷಗಳಲ್ಲಿ ಕೋವಿಡ್ ಕಾರಣ ಯಾವುದೇ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಪ್ರಸ್ತುತ ಯಾವುದೇ ಆತಂಕವಿಲ್ಲದೇ ದೇವಿಯ ಕೃಪೆಗೆ ಪಾತ್ರರಾಗುವ ರೀತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರಿ ದೇವಿಯ ಅದ್ದೂರಿ ಮೆರವಣಿಗೆ ನಡೆದಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಆನೆಯ ಮೇಲಿನ ದೇವಿಯ ಮೂರ್ತಿಯನ್ನಿಟ್ಟು ಆಯೋಜಿಸಿದ್ದ ಅಂಬಾರಿ ಮೆರವಣಿಗೆ ಆಕರ್ಷಿಸಿತು. ಮುಖಂಡರಾದ ಬಸವರಾಜ ಉಳ್ಳಾಗಡ್ಡಿ, ನವೀನ ಗುಳಗಣ್ಣವರ, ಅಂದನಗೌಡ್ರ ಉಳ್ಳಾ ಗಡ್ಡಿ, ಬಸಪ್ಪ ಕಮ್ಮಾರ ಸೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.