ADVERTISEMENT

ಸಂತ್ರಸ್ತ ಮಹಿಳೆಯರು ಸಾಕ್ಷಿ‌ ಹೇಳುವ ಧೈರ್ಯ ತೋರಲಿ: ಪುಷ್ಪಾ ಅಮರನಾಥ

​ಪ್ರಜಾವಾಣಿ ವಾರ್ತೆ
Published 4 ಮೇ 2024, 15:48 IST
Last Updated 4 ಮೇ 2024, 15:48 IST
ಪುಷ್ಪಾ ಅಮರನಾಥ
ಪುಷ್ಪಾ ಅಮರನಾಥ   

ಕೊಪ್ಪಳ: ‘ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಮಹಿಳೆಯರು ಸ್ವಯಂಪ್ರೇರಿತವಾಗಿ ಮುಂದೆ ಬಂದು ಸಾಕ್ಷಿ ಹೇಳಲಿ. ಆಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಸಾಧ್ಯ’ ಎಂದು‌ ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪ್ರಜ್ವಲ್ ಕೃತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು, ವಿಶ್ವಗುರು ಎನಿಸಿಕೊಳ್ಳುವ ನರೇಂದ್ರ ಮೋದಿ ಯಾಕೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಪಡಿಸಿಲ್ಲ’ ಎಂದು ಪ್ರಶ್ನಿಸಿದರು.

‘ಪ್ರಜ್ವಲ್ ವಿಕೃತಕಾಮಿ ಉಮೇಶರೆಡ್ಡಿಗಿಂತಲೂ ಅಪಾಯಕಾರಿ, ಸಂತ್ರಸ್ತರು ಧೈರ್ಯವಾಗಿ ಮುಂದೆ ಬಂದು ಸಾಕ್ಷಿ‌ ಹೇಳಬೇಕು. ನೇಹಾ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಯಾಗುವ ತನಕ ನಾವು ಹೋರಾಟ ಮಾಡುತ್ತೇವೆ, ಹಾಸನದಲ್ಲಿ ಪ್ರಜ್ವಲ್‌ನಿಂದ ಸಂತ್ರಸ್ತರಾದ ಮಹಿಳೆಯರಿಗೆ ನ್ಯಾಯ ಒದಗಿಸಲು ಬಿಜೆಪಿ ನಾಯಕಿಯರು ಹೋರಾಟ ಮಾಡುವರೇ’ ಎಂದು ಸವಾಲು ಹಾಕಿದರು.

ADVERTISEMENT

‘ಅನೇಕ ಗ್ಯಾರಂಟಿ ಯೋಜನೆಗಳು ಬಡವರ ಬದುಕು ಹಸನು ಮಾಡಿವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಈಗಾಗಲೇ ಘೋಷಿಸಿರುವ ಗ್ಯಾರಂಟಿಗಳನ್ನೂ ಅನುಷ್ಠಾನ ಮಾಡುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರು ಸಹಿ ಹಾಕಿದ್ದಾರೆ. ಆದರೆ ಬಿಜೆಪಿ ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ನರೇಂದ್ರ ಮೋದಿ ಸಹಿಯೇ ಇಲ್ಲ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಅವರಿಗೆ ಮತ ಹಾಕಬೇಕು’ ಎಂದು ಜನರಲ್ಲಿ ಅವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.