ADVERTISEMENT

ರಭಸದ ಮಳೆಗೆ ಕಿತ್ತುಹೋದ ಹಳ್ಳದ ಸೇತುವೆ ರಸ್ತೆ

​ಪ್ರಜಾವಾಣಿ ವಾರ್ತೆ
Published 20 ಮೇ 2025, 11:45 IST
Last Updated 20 ಮೇ 2025, 11:45 IST
   

ಕೊಪ್ಪಳ: ಜಿಲ್ಲೆಯಾದ್ಯಂತ ಮಂಗಳವಾರ ರಭಸದಿಂದ ಮಳೆ ಸುರಿದಿದ್ದು ಇದು ಜನರ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮಬೀರಿತು.

ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿತ್ತು. ಕೆಲಹೊತ್ತು ಮಳೆ ಬಂದು ಹೋಗಿತ್ತು. ಸಂಜೆ ವೇಳೆಗೆ ಜೋರಾಗಿ ಮಳೆ ಸುರಿದಿದೆ. ಕುಕನೂರು ತಾಲ್ಲೂಕಿನ ಬಳಗೇರಿ ಹಾಗೂ ಬೂದುಗುಂಪಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಳ್ಳದ ಸೇತುವೆ ರಸ್ತೆ ಕಿತ್ತು ಹೋಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ‘ಸೇತುವೆ ಹಾಳಾದ ಬಗ್ಗೆ ಸಂಬಂಧ‍ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು. ಹಳ್ಳದ ನೀರು ಪಕ್ಕದ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.