ಕುಕನೂರು ತಾಲ್ಲೂಕಿನ ಬಳಗೇರಿ ಗ್ರಾಮದ ಹತ್ತಿರದ ಹಳ್ಳದ ಸೇತುವೆ ಕಿತ್ತು ಹೋಗಿದೆ
ಕುಕನೂರು: ಧಾರಾಕಾರ ಮಳೆಯಿಂದಾಗಿ ತಾಲ್ಲೂಕಿನ ಬಳಗೇರಿ ಹಾಗೂ ಬೂದುಗುಂಪಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಳ್ಳದ ಸೇತುವೆ ಕಿತ್ತು ಹೋಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಸೇತುವೆ ಮೂಲಕ ವಾಹನಗಳು ಸಾಗುತ್ತಿದ್ದವು.
‘ಸೇತುವೆ ಕುಸಿದಿದ್ದರಿಂದ ಜಮೀನುಗಳಿಗೆ ಮತ್ತು ಗ್ರಾಮದ ಒಳಗೆ ನೀರು ನುಗ್ಗಿದೆ. ಸಂಚಾರ ವ್ಯವಸ್ಥೆ ಸ್ಥಗಿತವಾಗಿದೆ’ ಎಂದು ಗ್ರಾಮಸ್ಥರಾದ ಪ್ರಕಾಶ ಹೇಳಿದರು.
ಘಟನಾ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಅಧಿಕಾರಿಗಳು, ‘ಸೇತುವೆ ಹಾಳಾದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ಹಳ್ಳದ ನೀರು ಪಕ್ಕದ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗಿದೆ ಎಂದು ರೈತರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.