ADVERTISEMENT

ಕೊಪ್ಪಳ: ಹಲವು ಕಡೆ ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2023, 12:12 IST
Last Updated 3 ಜುಲೈ 2023, 12:12 IST
   

ಕೊಪ್ಪಳ: ಸೋಮವಾರ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದ ಜಿಲ್ಲೆಯಲ್ಲಿ ಮಧ್ಯಾಹ್ನ ಮೂರು ಗಂಟೆ ವೇಳೆಗೆ ಜೋರಾಗಿ ಮಳೆ ಸುರಿಯಿತು.

ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಇಲ್ಲಿನ ಗವಿಸಿದ್ದೇಶ್ವರ ಮಠ ಹಾಗೂ ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ತಾಣ ಹುಲಿಗಿಗೆ ಸಾವಿರಾರು ಭಕ್ತರು ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಬಂದಿದ್ದಾರೆ‌. ಅವರಲ್ಲಿ ಬಹುತೇಕರು ‌ಮಳೆಗೆ ಸಿಲುಕಿ ಪರದಾಡಿದರು. ದರ್ಶನ ಮುಗಿಸಿಕೊಂಡು ವಾಪಸ್ ಊರಿಗೆ ಹೋಗಲು ಕಾಯುತ್ತಿದ್ದ ಪ್ರಯಾಣಿಕರು ಬಸ್ ಕೊರತೆಯಿಂದಾಗಿ ಕೊಪ್ಪಳ‌ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಚಿತ್ರಣ ಕಂಡು ಬಂತು.

ಗಂಗಾವತಿ, ಮುನಿರಾಬಾದ್ ನಲ್ಲಿಯೂ ಜೋರು ಮಳೆ ಸುರಿದಿದೆ. ಹುಲಿಗಿಯಲ್ಲಿ ಹುಲಿಗೆಮ್ಮ ದೇವಿ ದರ್ಶನಕ್ಕೆ ಲಕ್ಷಾಂತರ ಜನ ಬಂದಿದ್ದು, ದೇವಸ್ಥಾನದ ಮುಖ್ಯ ದ್ವಾರದಿಂದಲೇ ಭಕ್ತರು ಸರತಿಯಲ್ಲಿ ನಿಂತಿದ್ದರು‌.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.