ADVERTISEMENT

ಅಂಜನಾದ್ರಿಗೆ ಡಾ.ರಜನೀಶ್ ಗೋಯೆಲ್ ಭೇಟಿ: ಪೂಜೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 6:39 IST
Last Updated 24 ಜನವರಿ 2021, 6:39 IST
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಶನಿವಾರ ಭೇಟಿ ನೀಡಿದರು
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಶನಿವಾರ ಭೇಟಿ ನೀಡಿದರು   

ಗಂಗಾವತಿ: ತಾಲ್ಲೂಕಿನ ಅಂಜನಾದ್ರಿ ಪರ್ವತಕ್ಕೆ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಶನಿವಾರ ಭೇಟಿ ನೀಡಿದರು. ‌

ಕುಟುಂಬ ಸಮೇತರಾಗಿ ಬಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜನಾದ್ರಿ ಕೆಳಗಡೆ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಆರ್ಶೀವಾದ ಪಡೆದುಕೊಂಡರು.

ನಂತರ ಅಂಜನಾದ್ರಿ ಸಮೀಪದ ಐತಿಹಾಸಿಕ ಸ್ಥಳಗಳಾದ ಪಂಪಾ ಸರೋವರ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು.

ADVERTISEMENT

ಪ್ರಭಾರ ತಹಶೀಲ್ದಾರ್ ವರ್ಣೀತ್ ನೇಗಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.