ADVERTISEMENT

ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 6:10 IST
Last Updated 2 ಜನವರಿ 2026, 6:10 IST
   

ಕೊಪ್ಪಳ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ನಗರದ ಮಹಮ್ಮದ ಸೋಯಿಬ್ ಎಂಬಾತನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಅಪರಾಧಿಗೆ ₹25 ಸಾವಿರ ದಂಡ ಮತ್ತು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಮಹಮ್ಮದ್ ಸೋಯಿಬ್‌ ಎಂಬ ವ್ಯಕ್ತಿಯು ಎರಡು ವರ್ಷಗಳ ಹಿಂದೆ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಬಾಲಕಿ ಗರ್ಭಿಣಿಯಾದ ನಂತರ ಅಪಹರಣ ಮಾಡಿ ಇಲ್ಲಿನ ಮಹಿಳಾ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆಗಿನ ಪಿಎಸ್‌ಐ ನಾಗಪ್ಪ ಅವರು  ಪ್ರಥಮ ಹಂತದ ತನಿಖೆ ನಿರ್ವಹಿಸಿ ಮುಂದಿನ ತನಿಖೆಯನ್ನು ಆಂಜನೇಯ ನಿರ್ವಹಣೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.