ಯಲಬುರ್ಗಾ: ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದ ನೂತನ ರಥ ಪಟ್ಟಣಕ್ಕೆ ಬುಧವಾರ ಆಗಮಿಸಿದ್ದು, ಸ್ಥಳೀಯ ಭಕ್ತರು ಅದ್ದೂರಿಯಾಗಿ ಸ್ವಾಗತಿಸಿ ಮೆರಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು.
ಬಸವ ಜಯಂತಿ ದಿನ ಅದ್ದೂರಿಯಾಗಿ ಜರುಗಲಿರುವ ರಥೋತ್ಸವದಲ್ಲಿ ಈ ನೂತನ ರಥದ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಂಗಾವತಿಯಿಂದ ಯಲಬುರ್ಗಾ ಪಟ್ಟಣಕ್ಕೆ ಆಗಮಿಸಿದೆ. ರಥ ಆಗಮಿಸುತ್ತಿದ್ದಂತೆ ಸಾಕಷ್ಟು ಭಕ್ತರು ಸೇರಿ ಜೈಕಾರದೊಂದಿಗೆ ಬರಮಾಡಿಕೊಂಡರು.
ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ಶ್ರೀಧರಮುರಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮೀಜಿ ಅವರು ರಥಕ್ಕೆ ಹೂಗಳನ್ನು ಸಮರ್ಪಿಸಿ ಗೌರವಿಸಿದರು. ವಿವಿಧ ವಾದ್ಯ ಮೇಳದೊಂದಿಗೆ ಪ್ರಮುಖ ರಸ್ತೆಯ ಮುಖಾಂತರ ದೇವಸ್ಥಾನಕ್ಕೆ ತರಲಾಯಿತು. ದೇವಸ್ಥಾನ ಸಮಿತಿಯ ಪದಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಗೌರವ ಸಮರ್ಪಣೆ ಕಾರ್ಯ ವಿಜೃಂಭಣೆಯಿಂದ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.