ADVERTISEMENT

ಕಡಲೆಕಾಳು ಖರೀದಿ: ನೋಂದಣಿ ಆರಂಭ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 12:16 IST
Last Updated 24 ಫೆಬ್ರುವರಿ 2021, 12:16 IST

ಕೊಪ್ಪಳ: ‘ಹಿಂಗಾರು ಹಂಗಾಮಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲು ಜಿಲ್ಲೆಯಲ್ಲಿ 13 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಏ.30 ರವರೆಗೆ ನೋಂದಣಿ ಮಾಡಿಕೊಳ್ಳಬಹುದು’ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಲ್‌ಗೆ ₹5,100 ರಂತೆ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಎಫ್.ಎ.ಕ್ಯೂ. ಕಡಲೆಕಾಳನ್ನು ಖರೀದಿಸಲು ಫೆ.16 ರಂದು ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ತಿರ್ಮಾನಿಸಲಾಗಿತ್ತು.

ಅದರಂತೆ ಖರೀದಿ ಕೇಂದ್ರಗಳಾದ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ನವಲಿ, ಕುಕನೂರು ತಾಲ್ಲೂಕಿನ ಮಸಬಹಂಚಿನಾಳ, ತಳಕಲ್, ಯಲಬುರ್ಗಾತಾಲ್ಲೂಕಿನ ಮುಧೋಳ, ಚಿಕ್ಕೇನಕೊಪ್ಪ, ಬನ್ನಿಕೊಪ್ಪ, ತೊಂಡಿಹಾಳ, ಮೆಣೇಧಾಳ (ತಾವರಗೇರಾ) ಹಾಗೂ ಹನುಮಸಾಗರದಲ್ಲಿ ರೈತರ ಹೆಸರು ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಶಾಖಾ ವ್ಯವಸ್ಥಾಪಕ. ದೂ-08539-230040 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.