
ತಾವರಗೇರಾ: ‘ಮಕ್ಕಳು ಉತ್ತಮ ಸಂಸ್ಕಾರ, ಸಂಪ್ರದಾಯ, ದೇಶ ಪ್ರೇಮ ಬೆಳೆಸಿಕೊಳ್ಳಬೇಕು’ ಪಪಂ ಅಧ್ಯಕ್ಷ ನಾರಾಯಣಗೌಡ ಮೆದಿಕೇರಿ ಹೇಳಿದರು.
ಪಟ್ಟಣದ ಸಾರ್ವಜನಿಕ ಮೈದಾನದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ಥಳೀಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಪಪಂ ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ದುರಗಮ್ಮ, ಮುಖ್ಯಾಧಿಕಾರಿ, ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
ದಲಿತ ಸಂಘರ್ಷ ಸಮಿತಿ (ಡಾ. ಬಿ.ಆರ್ .ಅಂಬೇಡ್ಕರ್ ವಾದ) ಖಂಡನೆ:
ತಾವರಗೇರಾ ಪಟ್ಟಣದ ಸಾರ್ವಜನಿಕ ಮೈದಾನದಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ ವೇದಿಕೆ ಕಾರ್ಯುಕ್ರಮಕ್ಕೆ ಕನ್ನಡಪರ ಸಂಘಟನೆಗಳಿಗೆ ಆಹ್ವಾನ ನೀಡಿದ್ದು, ಸ್ಥಳೀಯ ದಸಂಸ ಸಂಘಟನೆಯ ಪದಾಧಿಕಾರಿಗಳನ್ನು ಆಹ್ವಾನ ಮಾಡದೇ ಅವಮಾನ ಮಾಡಲಾಗಿದೆ ಎಂದು ಮೇಲಾಧಿಕಾರಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಮದು ದಸಂಸ ತಾಲ್ಲೂಕು ಸಂಚಾಲಕ ದುರಗೇಶ ದೇವರಮನಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಸೇನಪ್ಪ ಹಿರೇಮನಿ ಆರೋಪಿಸಿದರು.
ವಿದ್ಯಾನಿಕೇತನ ಪಿಯು ಕಾಲೇಜು: ಇಲ್ಲಿನ ಶಶಿಧರಸ್ವಾಮಿ ವಿದ್ಯಾನಿಕೇತನ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರಗೌಡ ಪೊಪಾ ಧ್ವಜಾರೋಹಣ ನೆರವೇರಿಸಿದರು.
ಮಹಾತ್ಮಗಾಂಧಿ ವೃತ್ತದಲ್ಲಿ ಪ.ಪಂ ಉಪಾಧ್ಯಕ್ಷೆ ದುರಗಮ್ಮ ಶಿರವಾಟೆ ಮತ್ತು ಪೊಲೀಸ್ ಠಾಣೆಯಲ್ಲಿ ಪಿಎಸೈ ಚಂದ್ರಪ್ಪ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ.ರಾಜೇಂದ್ರ ಪ್ರಸಾದ ಧ್ವಜಾರೋಹಣ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.