
ಕುಷ್ಟಗಿ: ‘ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ಶಿಸ್ತು, ಸಮಾನತೆ ಮತ್ತು ಐಕ್ಯತೆ ಮನೋಭಾವಗಳನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ನಿವೃತ್ತ ಯೋಧ ಬುಡ್ಡಪ್ಪ ಹಿರೇಮನಿ ಹೇಳಿದರು.
ಪಟ್ಟಣದ ಎಸ್‌ವಿಸಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವನಾಥ ರೆಡ್ಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಅಂಗಡಿ, ಪ್ರಾಚಾರ್ಯರಾದ ಎಸ್.ಸಿ.ತಿಪ್ಪಾಶೆಟ್ಟಿ, ಭೀಮಸೇನ ಆಚಾರ, ಮಹದೇವ ಮಧಾಳೆ, ಮುಖ್ಯಶಿಕ್ಷಕ ಭೀಮರಾವ ಕುಲಕರ್ಣಿ ಇತರರು ಇದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ತಾ.ಪಂ ಕಚೇರಿ: ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಒ ಪಂಪಾಪತಿ ಹಿರೇಮಠ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ, ಗೀತಾ ಅಯ್ಯಪ್ಪ, ಸುವರ್ಣ, ಶಾಂತವೀರಯ್ಯ, ವಿಷಯ ನಿರ್ವಾಹಕರು, ಇತರೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.