ADVERTISEMENT

ಒಂದೇ ಸೆಮ್‌ನಲ್ಲಿ ಪರೀಕ್ಷೆ ನಡೆಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 13:36 IST
Last Updated 22 ಜುಲೈ 2021, 13:36 IST
ಪದವಿ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್‌ ಮೂಲಕ ಪರೀಕ್ಷೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ಎವೈಡಿಎಸ್‌ಒ ಸಂಘಟನೆಯ ಸದಸ್ಯರು ಮನವಿ ಸಲ್ಲಿಸಿದರು
ಪದವಿ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್‌ ಮೂಲಕ ಪರೀಕ್ಷೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ಎವೈಡಿಎಸ್‌ಒ ಸಂಘಟನೆಯ ಸದಸ್ಯರು ಮನವಿ ಸಲ್ಲಿಸಿದರು   

ಕೊಪ್ಪಳ:ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಆಗ್ರಹಿಸಿ ಹಾಗೂ ಜು.26ರಂದು ನಿಗದಿಯಾಗಿರುವ ಪರೀಕ್ಷೆ ಮುಂದೂಡಲು ಒತ್ತಾಯಿಸಿಎವೈಡಿಎಸ್‌ಒ ಸಂಘಟನೆಯ ಸದಸ್ಯರು ನಗರದ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ವಿಜಯನಗರ ವಿವಿ ಕುಲಪತಿ ಅವರಿಗೆ ಮನವಿ ಸಲ್ಲಿಸಿದರು.

ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಿಗದಿಯಾಗಿದ್ದರೂ ಬಳ್ಳಾರಿ ವಿವಿ ಮಾತ್ರ ಪರೀಕ್ಷೆ ಮುಂದೂಡುವುದು ಸಾಧ್ಯವಿಲ್ಲ ಎಂಬ ನಿಲುವು ತಾಳಿರುವುದು ವಿದ್ಯಾರ್ಥಿಗಳಿಗೆ ತೀವ್ರ ಸಂಕಷ್ಟ ಉಂಟು ಮಾಡಿದೆ.ಲಾಕ್‌ಡೌನ್‌ನಲ್ಲಿ 3-4 ತಿಂಗಳು ಕಾಲೇಜುಗಳಿಗೆ ಹಾಜರಾಗಲಾಗಿಲ್ಲ. ಎಷ್ಟೋ ವಿದ್ಯಾರ್ಥಿಗಳು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಅಲ್ಲದೆ ಇತರೆ ಕೆಲಸಗಳಲ್ಲಿ ತೊಡಗಿಕೊಂಡಿದ್ದು ಶೈಕ್ಷಣಿಕ ವಾತಾವರಣಕ್ಕೆ ಹೊಂದಿಕೊಳ್ಳಬೇಕಿದೆ ಎಂದು ಸಂಘಟನೆಯ ಸದಸ್ಯರು ಹೇಳಿದರು.

ಇಲ್ಲಿಯವರೆಗೂ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಶೇ 65 ರಷ್ಟು ಮಾತ್ರ ಲಸಿಕೆ ನೀಡಲಾಗಿದ್ದು, ಶೇ 35 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಬಾಕಿಯಿದೆ. ಹಾಗಾಗಿ ಪರೀಕ್ಷೆ ಮುಂದೂಡಿ ಶೇ 100ರಷ್ಟು ಲಸಿಕೆ ನೀಡಿದ ನಂತರವೇ ಪರೀಕ್ಷೆ ಪ್ರಾರಂಭಿಸಬೇಕು ಎಂದರು.

ADVERTISEMENT

ಸಾರಿಗೆ ಇಲಾಖೆ ಇದುವರೆಗೂ ಅನೇಕ ಹಳ್ಳಿಗಳಿಗೆ ಬಸ್ ಸಂಚಾರ ಆರಂಭಿಸಿಲ್ಲ.ಸರ್ಕಾರಿ ವಸತಿ ನಿಲಯಗಳಲ್ಲಿಯೂ ಸೌಲಭ್ಯ ದೊರೆತಿಲ್ಲ.ಇದಲ್ಲದೆ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಯುವುದರ ಬಗ್ಗೆ ಆತಂಕವಿದೆ ಎಂದರು.

ವಿದ್ಯಾರ್ಥಿಗಳ ಹಿತ ಗಮನದಲ್ಲಿಟ್ಟುಕೊಂಡು ಬೆಸ ಸೆಮಿಸ್ಟರ್ ಪರೀಕ್ಷೆ ಮುಂದೂಡಬೇಕು ಹಾಗೂ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್‌ನಲ್ಲಿ ಪರೀಕ್ಷೆ ನಡೆಸಬೇಕು ಎಂದು ಎಐಡಿಎಸ್‌ಒ ಮುಖಂಡರಾದ ಶರಣು ಪಾಟೀಲ್, ಗಂಗರಾಜು ಅಳ್ಳಳ್ಳಿ, ಶರಣು ಗಡ್ಡಿ, ಅಂತಿಮ ವರ್ಷದ ವಿದ್ಯಾರ್ಥಿಳಾದ ಸಚಿನ್, ಶ್ರೀನಿವಾಸ್, ವಿರುಪಾಕ್ಷಿ, ಪ್ರವೀಣ್, ಕೃಷ್ಣ, ಮಹೇಶ್, ಉಮೇಶ್,ರಮೇಶ್, ಮುತ್ತು ಮುಂತಾದವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.