ADVERTISEMENT

ಅಂಜನಾದ್ರಿ: 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:12 IST
Last Updated 14 ಜನವರಿ 2022, 6:12 IST
ಗಂಗಾವತಿ ತಾಲ್ಲೂಕಿನ ಧಾರ್ಮಿಕ ಪುಣ್ಯಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಮೂರು ದಿನಗಳಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಗಂಗಾವತಿ ತಾಲ್ಲೂಕಿನ ಧಾರ್ಮಿಕ ಪುಣ್ಯಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಮೂರು ದಿನಗಳಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.   

ಗಂಗಾವತಿ: ತಾಲ್ಲೂಕಿನ ಧಾರ್ಮಿಕ ಪುಣ್ಯಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಶುಕ್ರವಾರ ಬೆಳಿಗ್ಗೆ 6 ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಿ ತಹಶೀಲ್ದಾರ್ ಯು.ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇದೀಗ ಜ.14 ಮತ್ತು 15 ರಂದು ಸಂಕ್ರಮಣ ಹಬ್ಬ ಬಂದಿದ್ದು, ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಈಗಾಗಲೇ ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅಂಜನಾದ್ರಿ ದೇವಸ್ಥಾನಕ್ಕೆ ಬೇರೆ ಜಿಲ್ಲೆಗಳಿಂದಲೂ ಸಹ ಭಕ್ತರು ಬರುತ್ತಾರೆ. ಆದ್ದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ 3ದಿನ ದೇವರ ದರ್ಶನ‌ಕ್ಕೆ ಭಕ್ತರನ್ನು ನಿಷೇಧಿಸಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT