ADVERTISEMENT

ಕನಕಗಿರಿ: ಶಾಲೆಗೆ ₹ 1 ಲಕ್ಷ ದೇಣಿಗೆ ನೀಡಿದ ನಿವೃತ್ತ ಶಿಕ್ಷಕ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 23:30 IST
Last Updated 6 ಸೆಪ್ಟೆಂಬರ್ 2025, 23:30 IST
<div class="paragraphs"><p>ಶಿಕ್ಷಕ</p></div>

ಶಿಕ್ಷಕ

   

– ಗೆಟ್ಟಿ ಚಿತ್ರ

ಕನಕಗಿರಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಾಂತಾರಾಮ ಜೋಗಳೇಕರ್ ಅವರು ಶುಕ್ರವಾರ ಶಾಲೆಗೆ ₹1 ಲಕ್ಷ ದೇಣಿಗೆ ನೀಡಿದರು.

ADVERTISEMENT

ಈ ಶಾಲೆಯಲ್ಲಿ ಶಿಕ್ಷಕರಾಗಿದ್ದ ಸಂದರ್ಭದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಈಚೆಗೆ ನಿವೃತ್ತರಾಗಿದ್ದಾರೆ.

ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿಯಿಟ್ಟು, ಬರುವ ಬಡ್ಡಿ ಹಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ‌ ನೀಡುವಂತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.