ADVERTISEMENT

ರಸ್ತೆ ಕಾಮಗಾರಿಗೆ ಸಂಸದ, ಶಾಸಕರಿಂದ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2023, 16:30 IST
Last Updated 12 ಸೆಪ್ಟೆಂಬರ್ 2023, 16:30 IST
ಗಂಗಾವತಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದಿಂದ ಭಟ್ಟರ ನರಸಾಪುರ ಗ್ರಾಮಕ್ಕೆ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಸೋಮವಾರ ಸಂಸದ ಸಂಗಣ್ಣ ಕರಡಿ, ಕ್ಷೇತ್ರದ ಶಾಸಕ ಜಿ. ಜನಾರ್ದನರೆಡ್ಡಿ ಭೂಮಿಪೂಜೆ ನೆರವೇರಿಸಿದರು
ಗಂಗಾವತಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದಿಂದ ಭಟ್ಟರ ನರಸಾಪುರ ಗ್ರಾಮಕ್ಕೆ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಸೋಮವಾರ ಸಂಸದ ಸಂಗಣ್ಣ ಕರಡಿ, ಕ್ಷೇತ್ರದ ಶಾಸಕ ಜಿ. ಜನಾರ್ದನರೆಡ್ಡಿ ಭೂಮಿಪೂಜೆ ನೆರವೇರಿಸಿದರು   

ಗಂಗಾವತಿ: ತಾಲ್ಲೂಕಿನ ಅರಳಿಹಳ್ಳಿ ಗ್ರಾಮದಿಂದ ಭಟ್ಟರ ನರಸಾಪುರ ಗ್ರಾಮಕ್ಕೆ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಸೋಮವಾರ ಸಂಸದ ಸಂಗಣ್ಣ ಕರಡಿ, ಕ್ಷೇತ್ರದ ಶಾಸಕ ಜಿ. ಜನಾರ್ದನರೆಡ್ಡಿ ಅವರು ಭೂಮಿಪೂಜೆ ನೆರವೇರಿಸಿದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ‘ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅರಳಹಳ್ಳಿ-ಭಟ್ಟರ ನರಸಾಪುರ ಗ್ರಾಮದ ನಡುವಿನ 2.97 ಕಿ.ಮೀ. ರಸ್ತೆಯನ್ನು ₹ 1.84 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದರು.

‘ಗ್ರಾಮೀಣ ಭಾಗಗಳಿಗೆ ಸುಸಜ್ಜಿತ ರಸ್ತೆಗಳನ್ನು ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ರೂಪಿಸಲಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಈ ಯೋಜನೆಯಡಿ ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ’ ಎಂದರು.

ADVERTISEMENT

ಶಾಸಕ ಜಿ.ಜನಾರ್ದನರೆಡ್ಡಿ, ಮಾಜಿ ಶಾಸಕ ಜಿ.ವೀರಪ್ಪ, ಕೆಸರಹಟ್ಟಿ ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಪಿಡಿಒ ಕೃಷ್ಣ, ಸದಸ್ಯ ರವಿ, ದೇವರಾಜ ನಾಯಕ, ಚನ್ನಪ್ಪ ಮಳಗಿ, ಜಿ. ಶ್ರೀಧರ, ಜಿ.ಮಂಜುನಾಥ, ವಿಶ್ವನಾಥ ಮಾಲಿಪಾಟೀಲ, ಮಾಹಾಂತಗೌಡ, ಪೀರಸಾಬ, ಕಾಸೀಂಸಾಬ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.