ಕನಕಗಿರಿ: ‘ಆರ್‌ಎಸ್‌ಎಸ್ ಸಂಘಟನೆ ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ, ಮನೋಭಾವನೆ ಬೆಳೆಸುತ್ತಿದೆ. ಇಂಥ ಸಮಯದಲ್ಲಿ ಸಂಘದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಘಟನೆ ತಪ್ಪು ದಾರಿ ತುಳಿಯುತ್ತಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸ ಮಾಡಲಿ. ಪ್ರಿಯಾಂಕ್ ಖರ್ಗೆ ಅವರ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪುವುದಿಲ್ಲ ಎನ್ನುವ ವಿಶ್ವಾಸವಿದೆ. ಒಂದು ವೇಳೆ ಕ್ರಮ ಕೈಗೊಂಡರೆ ಸರ್ಕಾರ ಮುಂದಿನ ದಿನಗಳಲ್ಲಿ ಆತಂಕ, ನೋವುಗಳನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
‘ದೇಶದ ಜನರ ಕಲ್ಯಾಣಕ್ಕಾಗಿ ಆರ್‌ಎಸ್‌ಎಸ್ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಯುವ ಜನಾಂಗದಲ್ಲಿ ರಾಷ್ಟ್ರೀಯ ಪ್ರಜ್ಞೆ ಬೆಳೆಸುತ್ತಿದೆ. ಸಮಾಜದಲ್ಲಿ ಅಶಾಂತಿ ತಲೆದೋರಿದಾಗ, ನೈಸರ್ಗಿಕ ವಿಪತ್ತುಗಳು ಸಂಭವಿಸಿದ ವೇಳೆಯಲ್ಲಿ ಸಂಘಟನೆಯವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.