ಕನಕಗಿರಿ: ಇಲ್ಲಿನ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ರುದ್ರಸ್ವಾಮಿ ಅವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.
ಪೂಜ್ಯರ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಪುಷ್ಪಾರ್ಚನೆ, ಭೂರಿಗಣಾರಾಧನೆ ನಡೆಯಿತು. ರುದ್ರಸ್ವಾಮಿಗಳ ಮೂರ್ತಿ ಮೆರವಣಿಗೆಗೆ ಕಲ್ಮಠದ ಮುಂದೆ ಚಾಲನೆ ನೀಡಲಾಯಿತು.
ಮಾಜಿ ಶಾಸಕ ಜಿ.ವೀರಪ್ಪ ಮಾತನಾಡಿ,‘ಶಿಕ್ಷಣ, ಆರೋಗ್ಯ ಹಾಗೂ ಪರಿಸರ ರಕ್ಷಣೆಗೆ ಒತ್ತು ನೀಡಿದ್ದ ರುದ್ರಸ್ವಾಮಿಗಳು ತಮ್ಮ ಜೀವಿತಾವಧಿಯಲ್ಲಿ ಹಲವಾರು ಸಮಾಜಮುಖಿ ಕೆಲಸ ಮಾಡಿದ್ದರು’ ಎಂದು ಸ್ಮರಿಸಿದರು.
‘ಬರದ ನಾಡಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳಸಿದ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಪ್ರೌಢಶಾಲೆ ತೆರೆದರು. ಜನರ ಆರೋಗ್ಯ ಸುಧಾರಣೆಗೆ ಆರೋಗ್ಯ ತಪಾಸಣಾ ಶಿಬಿರ, ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸಿದ್ದರು. ಸದಾ ಸಮಾಜಮುಖಿ ಚಿಂತನೆಯುಳ್ಳವರಾಗಿ ಶಾಲೆ ಆವರಣದಲ್ಲಿ ನೂರಾರು ತಳಿಯ ಗಿಡಗಳನ್ನು ಬೆಳೆಸಿದ್ದಾರೆ. ಕಾಮಲೆ ರೋಗಕ್ಕೆ ಚಿಕಿತ್ಸೆ ನೀಡುತ್ತಿದ್ದರು’ ಎಂದು ಹೇಳಿದರು.
ಸುವರ್ಣಗಿರಿಯ ಚನ್ನಮಲ್ಲಸ್ವಾಮಿ, ತಹಶೀಲ್ದಾರ್ ವಿಶ್ವನಾಥ ಮುರುಡಿ, ಮಾಜಿ ಶಾಸಕ ಬಸವರಾಜ ದಢೇಸೂಗೂರು,
ಎಪಿಎಂಸಿ ಮಾಜಿ ಅಧ್ಯಕ್ಷ ಡಾ.ದೊಡ್ಡಯ್ಯ ಅರವಟಗಿಮಠ, ಸಂಸ್ಥೆ ಉಪಾಧ್ಯಕ್ಷ ಬಸವರಾಜ ಗುಗ್ಗಳಶೆಟ್ರ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಪ್ರಭುಶೆಟ್ಟರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ವಕ್ತಾರ ಶರಣಬಸಪ್ಪ ಭತ್ತದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರೇಶ ಸಮಗಂಡಿ, ಬಿಜೆಪಿ ಅಧ್ಯಕ್ಷ ಸಣ್ಣ ಕನಕಪ್ಪ, ಮಾಜಿ ಅಧ್ಯಕ್ಷ ಮಹಾಂತೇಶ ಸಜ್ಜನ್, ಉಪಾಧ್ಯಕ್ಷ ವಾಗೀಶ ಹಿರೇಮಠ ಇದ್ದರು.
ರುದ್ರಸ್ವಾಮಿಗಳ ಭಾವಚಿತ್ರದ ಮೆರವಣಿಗೆ ರಾಜಬೀದಿ ಸೇರಿದಂತೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.