ADVERTISEMENT

ಯಕ್ಷಗಾನ ಕಲೆ ಉಳಿಸಿ: ಸಂಗಣ್ಣ ಕರಡಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 16:19 IST
Last Updated 29 ಜೂನ್ 2025, 16:19 IST
ಕೊಪ್ಪಳದಲ್ಲಿ ಶನಿವಾರ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ ಉದ್ಘಾಟಿಸಿದರು
ಕೊಪ್ಪಳದಲ್ಲಿ ಶನಿವಾರ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ ಉದ್ಘಾಟಿಸಿದರು   

ಕೊಪ್ಪಳ: ‘ಯಕ್ಷಗಾನ ಪ್ರಾಚೀನ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಉಳಿಸಿ, ಬೆಳಸಿಕೊಂಡು ಹೋಗಬೇಕು’ ಎಂದು  ಕಾಂಗ್ರೆಸ್ ಮುಖಂಡ ಸಂಗಣ್ಣ ಕರಡಿ ಹೇಳಿದರು.    

ನಗರ ಸಾಹಿತ್ಯ ಭವನದಲ್ಲಿ ಕರಾವಳಿ ಬಳಗ ಕೊಪ್ಪಳ, ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ವತಿಯಿಂದ ನಡೆದ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ‘ಯಕ್ಷಗಾನ ಕಲೆಯು ಕನ್ನಡ ಭಾಷೆಯನ್ನು ಗಟ್ಟಿಗೊಳಿಸುತ್ತದೆ, ಈ ಕಲೆಯು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕಲೆ’ ಎಂದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ ‘ಯಕ್ಷಗಾನಕ್ಕೆ ಇರುವ ಶಕ್ತಿ ಎಂಥದ್ದು ಎನ್ನುವುದನ್ನು ಮೆಲುಕು ಹಾಕಬೇಕಾಗಿದೆ. ಈ ಕಲೆ ದೇಶ, ವಿದೇಶಗಳಲ್ಲಿ ಖ್ಯಾತಿ ಪಡೆದಿದೆ’ ಎಂದು ಹೇಳಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಕಣವಿ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಶಿಕರ ಶೆಟ್ಟಿ, ಕರಾವಳಿ ಬಳಗದ ಗೌರವ ಅಧ್ಯಕ್ಷ ಜೀವನ ಶೆಟ್ಟಿ, ಸಿದ್ಧಿವಿನಾಯಕ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಸಂಚಾಲಕ ರಂಜಿತ ಶೆಟ್ಟಿ ವಕ್ವಾಡಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.