ADVERTISEMENT

​ಅಳವಂಡಿ: ಸಾವಿತ್ರಿಬಾಯಿ ಫುಲೆ ಜಯಂತಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 12:33 IST
Last Updated 5 ಜನವರಿ 2022, 12:33 IST
ಅಳವಂಡಿರ ಸ್ಪಂದನ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು
ಅಳವಂಡಿರ ಸ್ಪಂದನ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು   

ಅಳವಂಡಿ: ‘ದೇಶದಲ್ಲಿ ಹಿಂದಿನ ದಿನಮಾನಗಳಲ್ಲಿ ಮಹಿಳೆಯರಿಗೆ ಯಾವ ಸ್ವಾತಂತ್ರ್ಯದ ಹಕ್ಕು ಇರಲಿಲ್ಲ. ಅಂತಹ ಸಮಯದಲ್ಲಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿ ಮಹಿಳೆಯರಿಗೆ ಶಿಕ್ಷಣ ಕೊಡಿಸಿದ ಮಹಾನ್ ಚೇತನ ಎಂದರೆ ಅದು ಸಾವಿತ್ರಿಬಾಯಿ ಫುಲೆ’ ಎಂದು ಸ್ಪಂದನ ಸಂಸ್ಥೆಯ ಅಧ್ಯಕ್ಷ ಎ.ಕೆ.ಮುಲ್ಲಾನವರ ಹೇಳಿದರು.

ಗ್ರಾಮದ ಸ್ಪಂದನ ಪ್ರಾಥಮಿಕ ಶಾಲೆಯಲ್ಲಿ ನಡೆದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಣ್ಣು ಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ ಸಮಾಜಕ್ಕೆ ಎದುರಾಗಿ ನೋವು ನಲಿವುಗಳನ್ನು ಮೆಟ್ಟಿನಿಂತು ಹೆಣ್ಣು ಮಕ್ಕಳಿಗೆ ಶಾಲೆ ಆರಂಭಿಸಿದ ಸಾವಿತ್ರಿ ಬಾಯಿ ಫುಲೆ ಅವರು ‘ಅಕ್ಷರದ ಅವ್ವ’ ಎಂದು ಹೆಸರಾಗಿದ್ದಾರೆ. ಮಹಿಳೆಯರ ಶಿಕ್ಷಣಕ್ಕಾಗಿ ಸಾಕಷ್ಟು ಅವಮಾನವನ್ನು ಅನುಭವಿಸಿ ಎದೆಗುಂದದೆ ತಮ್ಮ ಪ್ರಾಮಾಣಿಕ ಸೇವೆ ಮಾಡಿ ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಡುವ ಕಾರ್ಯ ಮಾಡಿದ್ದಾರೆ.

ADVERTISEMENT

ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಬೆಣಕಲ್ಲ, ನೇತ್ರಾ ಮದ್ದಣ್ಣವರ, ವಿಜಯಲಕ್ಷ್ಮಿ ಗಾಳಿ, ಪ್ರೀತಿ ಟಿಕಾರೆ, ಸುಜಾತ ಮುದ್ಲಾಪುರ, ಗೊಣೇಶ ಹಂಚಿನಾಳ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.