
ಅಳವಂಡಿ (ಕೊಪ್ಪಳ): ಕೊಪ್ಪಳ ತಾಲ್ಲೂಕಿನ ಅಳವಂಡಿ ಸಮೀಪದ ತಿಗರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಕವಲೂರು ಅವರು ಶಾಲೆಗೆ ನೀರಿನ ವ್ಯವಸ್ಥೆ ಕಲ್ಪಿಸಲು ತಮ್ಮ ಸ್ವಂತ ಖರ್ಚಿನಲ್ಲಿ ಬೋರ್‌ವೆಲ್ ಕೊರೆಸಿ ನೀರಿನ ದಾಹ ನೀಗಿಸಿದ್ದಾರೆ.
ಶಾಲಾ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೈಪ್‌ಲೈನ್ ಅಳವಡಿಸಲಾಗಿತ್ತು. ಕೆಲವೊಮ್ಮೆ ನೀರಿನ ಸಮಸ್ಯೆ ಕೂಡ ಕಾಡುತ್ತಿತ್ತು. ಇದನ್ನು ಮನಗಂಡ ಅವರು ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಮಕ್ಕಳಿಗೆ ಕುಡಿಯಲು ನೀರು, ಬಿಸಿಯೂಟ ತಯಾರಿಕೆಗೆ, ಕೈತೋಟ ನಿರ್ಮಿಸಲು ಸಹಕಾರಿಯಾಗುತ್ತದೆ ಎನ್ನುತ್ತಾರೆ ಶಿಕ್ಷಕರು.
‘ಎಸ್‌ಡಿಎಂಸಿ ಅಧ್ಯಕ್ಷ ಆದ ನಂತರ ಶಾಲೆಗೆ ಏನಾದರೂ ದೇಣಿಗೆ ನೀಡಬೇಕು ಎಂಬ ಹಂಬಲ ಇತ್ತು. ಶಾಲೆಗೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ₹40 ಸಾವಿರ ರೂಪಾಯಿ ಖರ್ಚು ಮಾಡಿ ಬೋರ್‌ವೆಲ್ ಹಾಕಿಸಿದ್ದೇನೆ’ ಎಂದು ವೆಂಕಟೇಶ ಕವಲೂರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.