ADVERTISEMENT

ಶಾಲೆಯ ಅಭಿವೃದ್ಧಿಗೆ ಸಹಕಾರ

ದಶಮಾನೋತ್ಸವ ಕಾರ್ಯಕ್ರಮದಲ್ಲಿ ಶಾಸಕ ದಢೇಸೂಗೂರು ಭರವಸೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 10:02 IST
Last Updated 18 ಫೆಬ್ರುವರಿ 2020, 10:02 IST
ಕನಕಗಿರಿ ಸಮೀಪದ ನವಲಿ ಗ್ರಾಮದ ನಿರುಪಾಧೀಶ್ವರ ಹಿರಿಯ ಪ್ರಾಥಮಿಕ ಶಾಲೆಯ ದಶಮಾನೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಬಸವರಾಜ ದಢೇಸೂಗೂರ ಉದ್ಘಾಟಿಸಿದರು
ಕನಕಗಿರಿ ಸಮೀಪದ ನವಲಿ ಗ್ರಾಮದ ನಿರುಪಾಧೀಶ್ವರ ಹಿರಿಯ ಪ್ರಾಥಮಿಕ ಶಾಲೆಯ ದಶಮಾನೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಬಸವರಾಜ ದಢೇಸೂಗೂರ ಉದ್ಘಾಟಿಸಿದರು   

ಕನಕಗಿರಿ: ಗ್ರಾಮೀಣ ಭಾಗದಲ್ಲಿ ಖಾಸಗಿ ಶಾಲೆ ಸ್ಥಾಪಿಸಿ ಕಳೆದ ಹತ್ತು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಕಾರ್ಯದರ್ಶಿ ಮರಿರಾಜ ಭಜಂತ್ರಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.

ಇಲ್ಲಿಗೆ ಸಮೀಪದ ನವಲಿ ಗ್ರಾಮದ ನಿರುಪಾಧೀಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಾಲೆಯ ದಶಮಾನೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದ ಅಡಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ADVERTISEMENT

ಸಾನ್ನಿಧ್ಯ ವಹಿಸಿದ್ದ ಚಂದ್ರಶೇಖರಯ್ಯ ಸೋಮನಾಳ, ಬಿಜೆಪಿ ಮುಖಂಡರಾದ ಬಿ. ಜಿ. ಅರಳಿ, ಶ್ರೀಧರ ಗದ್ದಡಕಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ, ಮುಖ್ಯಶಿಕ್ಷಕ ನಿಂಗಪ್ಪ ನಾಯಕ ಮಾತನಾಡಿದರು.

ಪಂಚಯ್ಯಸ್ವಾಮಿ ಬಿದ್ನೂರಮಠ, ಎಪಿಎಂಸಿ ನಿರ್ದೇಶಕ ಹನುಮನಗೌಡ ಖ್ಯಾಡೆದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹನುಮೇಶ ನಾಯಕ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ, ಪುರಸಭೆ ಸದಸ್ಯ ತಿಮ್ಮನಗೌಡ, ಪಟ್ಟಣ ಪಂಚಾಯಿತಿ ಸದಸ್ಯ ರವಿ ಭಜಂತ್ರಿ, ನಿರುಪಾಧೀಶ್ವರ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯದರ್ಶಿ ಮರಿರಾಜ ಭಜಂತ್ರಿ, ನಿವೃತ್ತ ಶಿಕ್ಷಕ ಮಹಾಂತೇಶ, ಪ್ರಮುಖರಾದ ಬಿಲ್ಗಾರ ನಾಗರಾಜ, ಮಹಾಂತೇಶ ಸಜ್ಜನ್, ಸಣ್ಣ ಕನಕಪ್ಪ, ಸಿದ್ರಾಮಗೌಡ ಉಪ್ಪಳ ಹಾಗೂ ಮಲ್ಲಿಕಾರ್ಜುನ ಬಳಗಾನೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.