ಕಾರಟಗಿ: ತಾಲ್ಲೂಕಿನ ಯರಡೋಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮದ್ಯದ ಅಮಲಿನಲ್ಲಿ ಕಿಡಿಗೇಡಿಗಳು ಕೊಠಡಿಯೊಳಕ್ಕೆ ತೆರಳಿ ಬೋಧನೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಬಿಸಾಡಿ, ಖುರ್ಚಿಯನ್ನು ಜಖಂಗೊಳಿಸಿ, ಅಶ್ಲೀಲ ಬರಹ, ಚಿತ್ರಗಳನ್ನು ಬೋರ್ಡ್‍ನಲ್ಲಿ ಬರೆದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಭಾನುವಾರ ತಡರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಕಾಶೆ, ಪುಸ್ತಕಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದು, ಆವರಣದಲ್ಲಿ ಮದ್ಯದ ಬಾಟಲಿ ಬಿದ್ದಿದೆ ಎನ್ನಲಾಗಿದೆ.
ಶಾಲೆಯ ಮುಖ್ಯಗುರು ಶಶಿಧರಸ್ವಾಮಿ ಪ್ರತಿಕ್ರಿಯಿಸಿ, ‘ಈಗಾಗಲೇ ಎಸ್‌ಡಿಎಂಸಿ ಪದಾಧಿಕಾರಿಗಳಿಗೆ, ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದು, ಈ ಬಗ್ಗೆ ಚರ್ಚಿಸಿ, ದೂರು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.