ADVERTISEMENT

‘ಬಿತ್ತನೆ ಬೀಜ ಸದುಪಯೋಗ ಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 12:40 IST
Last Updated 7 ಅಕ್ಟೋಬರ್ 2020, 12:40 IST
ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ರೈತರಿಗೆ ಸಬ್ಸಿಡಿ ದರದಲ್ಲಿ ಶೇಂಗಾ ಮತ್ತು ಕಡಲೆ ಬೀಜ ವಿತರಣೆ ಮಾಡಲಾಯಿತು.
ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ರೈತರಿಗೆ ಸಬ್ಸಿಡಿ ದರದಲ್ಲಿ ಶೇಂಗಾ ಮತ್ತು ಕಡಲೆ ಬೀಜ ವಿತರಣೆ ಮಾಡಲಾಯಿತು.   

ಗಂಗಾವತಿ: ರೈತ ಸಂಪರ್ಕ ಕೇಂದ್ರದಿಂದ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ ಸಲಹೆ ನೀಡಿದರು.

ತಾಲ್ಲೂಕಿನ ವೆಂಕಟಗಿರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಶೇಂಗಾ ಮತ್ತು ಕಡಲೆ ಬೀಜ ವಿತರಣೆ ಮಾಡಿ ಅವರು ಮಾತನಾಡಿದರು.

ರೈತರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಸಬ್ಸಿಡಿಯಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. ರೈತರು ಈ ಬಿತ್ತನೆ ಬೀಜಗಳನ್ನು ಖರೀದಿಸಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರುದ್ರಪ್ಪ, ಪ್ರಮುಖರಾದ ಈರಪ್ಪ, ಶಿವಪ್ಪ, ದೊಡ್ಡರಾಮನಗೌಡ ವಡ್ಡರಹಟ್ಟಿ, ಬೆಟ್ಟಪ್ಪ ಈಡಿಗೇರ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ನಯನದೇವಿ ಹಾಗೂ ಸಹಾಯಕಿ ಸರೋಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.