ADVERTISEMENT

ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 6:22 IST
Last Updated 28 ನವೆಂಬರ್ 2021, 6:22 IST
ಕೊಪ್ಪಳದಲ್ಲಿ ನಡೆದ ಉಚಿತ ಕಾರ್ಯಾಗಾರ, ಸಂವಾದ ಕಾರ್ಯಕ್ರಮದಲ್ಲಿ ಐಪಿಎಸ್‌ ಅಧಿಕಾರಿ ರವಿ.ಡಿ.ಚನ್ನಣ್ಣನವರ ಮಾತನಾಡಿದರು
ಕೊಪ್ಪಳದಲ್ಲಿ ನಡೆದ ಉಚಿತ ಕಾರ್ಯಾಗಾರ, ಸಂವಾದ ಕಾರ್ಯಕ್ರಮದಲ್ಲಿ ಐಪಿಎಸ್‌ ಅಧಿಕಾರಿ ರವಿ.ಡಿ.ಚನ್ನಣ್ಣನವರ ಮಾತನಾಡಿದರು   

ಕೊಪ್ಪಳ: ‘ನಿಮ್ಮ ಭವಿಷ್ಯದ ಆಯ್ಕೆ ನೀವೇ ಮಾಡಬೇಕು. ವಿಚಾರ ಮಾಡಿ, ಗಟ್ಟಿ ನಿರ್ಧಾರ ಕೈಗೊಂಡು ಮುನ್ನಡೆಯಿರಿ’ ಎಂದುಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಎಸ್-ಯುಪಿಎಸ್‌ಸಿ ಸಂಸ್ಥೆಯು ಶನಿವಾರ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಾವುದೇ ರಂಗವಿರಲಿ, ಅದಕ್ಕೆ ತನ್ನದೇ ಘನತೆ ಯಿದೆ. ನಾವೇನಾಗಬೇಕು ಎಂಬ ಗುರಿ ಸ್ಪಷ್ಟವಾಗಿರಬೇಕು. ಸ್ಪರ್ಧಾತ್ಮಕ ಕಲಿಕೆಗೆ ಸಾಕಷ್ಟು ಅವಕಾಶಗಳಿವೆ’ ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾತನಾಡಿ, ‘ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಹಲವು ಅಭ್ಯರ್ಥಿಗಳು ಆಸಕ್ತಿ ಹೊಂದಿದ್ದಾರೆ. ಜಿಲ್ಲಾಡಳಿತದಿಂದ ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ನೆರವು ನೀಡಲಾಗುವುದು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿಸಿಇಒ ಫೌಜಿಯಾ ತರನ್ನುಮ್ ಮಾತನಾಡಿ, ‘ನಗರ ಪ್ರದೇಶದ ಅಭ್ಯರ್ಥಿಗಳಿಗೆ ಸಾಕಷ್ಟು ಅವಕಾಶ, ಅನುಕೂಲಗಳಿವೆ. ಗ್ರಾಮೀಣ ಭಾಗದಲ್ಲೂ ಇಂತಹ ಅನುಕೂಲ, ಅವಕಾಶ ಕಲ್ಪಿಸಬೇಕು’ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್, ಸಂಪನ್ಮೂಲ ವ್ಯಕ್ತಿ ಅಶೋಕ ಮಿರ್ಜಿ, ಆಯೋಜಕ ಹನುಮೇಶ ಎಸ್.ಹುಳ್ಕಿಹಾಳ, ಜಿ.ವಿನಾಯಕ, ಶಂಕ್ರಯ್ಯ ಅಬ್ಬಿಗೇರಿಮಠ, ಶರಣಬಸವ ಹುಲಿಹೈದರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.