ADVERTISEMENT

ಲೈಂಗಿಕ ಕಿರುಕುಳ: ನಾಲ್ಕು ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 4:06 IST
Last Updated 14 ಜೂನ್ 2022, 4:06 IST

ಕೊಪ್ಪಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಸೆಲ್ಫಿ ಫೋಟೊ ತೆಗೆದುಕೊಂಡು ಬೆದರಿಕೆ ಹಾಕಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಮರೇಶ ಬಂಡಿ ಎಂಬ ಆರೋಪಿಗೆ ನಾಲ್ಕು ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆ ಹಾಗೂ ₹10,500 ದಂಡ ವಿಧಿಸಲಾಗಿದೆ.

ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಧೀಶರಾದ ಶಂಕರ ಎಂ.ಜಾಲವಾದಿ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಘಟನೆಯ ಹಿನ್ನೆಲೆ: 2019ರ ಜುಲೈ 17ರಂದು ಸಂತ್ರಸ್ತೆಯು ಕೆಲಸಕ್ಕೆ ಹೋದಾಗ ಅಮರೇಶ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಫೋಟೋವನ್ನು ವಾಟ್ಸ್‌ ಆ್ಯಪ್‌ ಮೂಲಕ ಇತರರಿಗೂ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ತನಿಖೆಯಲ್ಲಿ ಸಾಬೀತಾಗಿದೆ. ಆತನ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯ ಪಿಎಸ್‌ಐ ವೀರಾರೆಡ್ಡಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ADVERTISEMENT

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು. ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.