ADVERTISEMENT

‘ಪೌರಕಾರ್ಮಿಕರ ಸೇವೆ ಮೌಲ್ಯಯುತ’

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 14:16 IST
Last Updated 24 ಸೆಪ್ಟೆಂಬರ್ 2024, 14:16 IST
ಯಲಬುರ್ಗಾ ಪಟ್ಟಣದಲ್ಲಿ ಪೌರಸೇವಾ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಲಾಯಿತು
ಯಲಬುರ್ಗಾ ಪಟ್ಟಣದಲ್ಲಿ ಪೌರಸೇವಾ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಲಾಯಿತು   

ಯಲಬುರ್ಗಾ: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ಸ್ಥಳೀಯ ಘಟಕದ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚಾಲನೆ ನೀಡಿದ ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ವಿಶೇಷವಾಗಿದೆ. ಪೌರ ಕಾರ್ಮಿಕರ ದಿನಾಚರಣೆಯ ಮೂಲಕ ಗೌರವಿಸುವುದರ ಜೊತೆಗೆ ಅವರ ಬೇಡಿಕೆ ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅವರ ಸೇವೆಯನ್ನು ಗುರುತಿಸಿ ವಿಶೇಷ ಆರ್ಥಿಕ ಸ್ಥಾನಮಾನ ಕಲ್ಪಿಸಿಕೊಡುವುದು ಮುಖ್ಯ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಮಾತನಾಡಿ, ಪೌರ ಕಾರ್ಮಿಕರು ಕಾಯಕಯೋಗಿಗಳು ಪಟ್ಟಣದ ಪ್ರತಿಯೊಂದು ವಾರ್ಡ್ ಓಣಿಯಲ್ಲಿ ನಿತ್ಯ ಇವರ ಸೇವೆ ಜಾರಿಯಲ್ಲಿರುತ್ತದೆ. ಇವರ ಸೇವೆಗೆ ಬೆಲೆಕಟ್ಟಲು ಸಾಧ್ಯವಾಗುವುದಿಲ್ಲ ಎಂದರು.

ADVERTISEMENT

ಉಪಾಧ್ಯಕ್ಷೆ ವಿಜಯಲಕ್ಷ್ಮಿ ಬೇಲೇರಿ, ಸದಸ್ಯ ಅಮರೇಶ ಹುಬ್ಬಳ್ಳಿ, ರೇವಣೆಪ್ಪ ಹಿರೇಕುರುಬರ ಸೇರಿ ಅನೇಕರು ಮಾತನಾಡಿ, ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ನೀಡಿದರು.

ಮುಖ್ಯಾಧಿಕಾರಿ ನಾಗೇಶ ಪ್ರಾಸ್ತವಿಕವಾಗಿ ಮಾತನಾಡಿದರು. ಪ.ಪಂ ಸದಸ್ಯರಾದ ಕಳಕಪ್ಪ ತಳವಾರ, ಹನಮಂತಪ್ಪ ಭಜಂತ್ರಿ, ಬಸವಲಿಂಗಪ್ಪ ಕೊತ್ತಲ, ರಿಯಾಜ ಖಾಜಿ ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಹನಮಂತಪ್ಪ ಛಲವಾದಿ, ಸಿಬ್ಬಂದಿಗಳಾದ ಸುಮಾ ಕಂಚಿ, ರಮೇಶ ಬೇಲೇರಿ, ಶಿವಕುಮಾರ ಸರಗಣಾಚಾರ, ಸುಭಾಷ ಭಾವಿಮನಿ, ವೆಂಕಣ್ಣ ಜೋಷಿ, ರವಿ ಪತ್ತೆದಾರ, ಚೆನ್ನಯ್ಯ ಸಂಕಿನಮಠ ಸೇರಿ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.