
ಯಲಬುರ್ಗಾ: ‘ಧರ್ಮ, ಜಾತಿ, ಮೇಲು–ಕೀಳು ಎಂಬ ಭಾವನೆಯನ್ನು ತಾಳದೆ ಎಲ್ಲರೂ ಒಂದೇ ಎನ್ನುವ ಭಾವ ಮೂಡಿಸಿಕೊಂಡು ಯಾರೂ ಜೀವನ ನಡೆಸುತ್ತಾರೆಯೋ ಅವರೇ ಆದರ್ಶ ವ್ಯಕ್ತಿಗಳು’ ಎಂದು ಜಿಪಂ ಮಾಜಿ ಸದಸ್ಯ ಸಿ.ಎಚ್. ಪೊಲೀಸ್‍ಪಾಟೀಲ ಹೇಳಿದರು.
ಪಟ್ಟಣದಲ್ಲಿ ಬಸವ ಶಿವಯೋಗ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಸಿಕ ಬಸವಾನುಭವ ಶಿವಶರಣರ ಚಿಂತನ ಮಂಥನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಶರಣರ ನಡೆ ನುಡಿ ಪ್ರತಿಯೊಬ್ಬರು ಸಮಾನರಂತೆ ಕಾಣಬೇಕು ಎಂಬುದೇ ಆಗಿತ್ತು. ಅವರು ತಮ್ಮ ವಚನ ಸಾಹಿತ್ಯದ ಮೂಲಕ ಸಮಾಜ ಸುಧಾರಣೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ವ್ಯಕ್ತಿತ್ವ ಕೇವಲ ಭಾಷಣ ಮತ್ತು ಚಿಂತನೆ ಮಾಡಿದರೆ ಸಾಲದು ಮೈಗೂಡಿಸಿಕೊಂಡು ಬದುಕು ಕಟ್ಟಿಕೊಳ್ಳುವತ್ತ ಪ್ರತಿಯೊಬ್ಬರು ಪ್ರಯತ್ನಿಸಿದರೆ ಮಾತ್ರ ಜೀವನ ಸಾರ್ಥಕವಾಗುತ್ತದೆ’ ಎಂದರು.
ಕರಮುಡಿಯ ಶಾಂತಮ್ಮ ಕಂಪಗೌಡರ ಸರ್ಜಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಸವರಾಜ ಕರಾಟೆ ಡೋಹರ ಕಕ್ಕಯ್ಯನವರ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಮರುಳ ಶಂಕರದೇವ, ಕಿನ್ನರಿ ಬೊಮ್ಮಯ್ಯನವರ ಜಯಂತಿ ಆಚರಿಸಲಾಯಿತು.
ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್. ಶ್ಯಾಗೋಟಿ, ಆರ್‍ಡಿಸಿಸಿ ಬ್ಯಾಂಕ್ ನಿರ್ದೆಶಕ ಶೇಖರಗೌಡ ಉಳ್ಳಾಗಡ್ಡಿ ಸೇರಿ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.