ADVERTISEMENT

ಗೊಂದಲ ಬೇಡ; ಎಲ್ಲ ಮಾಹಿತಿ ಕೊಡಬೇಕಿಲ್ಲ; ತಂಗಡಗಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 7:43 IST
Last Updated 6 ಅಕ್ಟೋಬರ್ 2025, 7:43 IST
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ   

ಕೊಪ್ಪಳ: ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಮೀಕ್ಷೆಗೆ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ, ಇಲ್ಲವೇ ಬಿಡಿ. ಎಲ್ಲ ಮಾಹಿತಿಯನ್ನೂ ನೀಡಲೇಬೇಕು ಎನ್ನುವುದು ಕಡ್ಡಾಯವೇನಿಲ್ಲ. ಈ ವಿಷಯದಲ್ಲಿ ಗೊಂದಲ ಬೇಡ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನ್ಯಾಯಾಲಯದ ಸೂಚನೆಯ ಪ್ರಕಾರವೇ ಸಮೀಕ್ಷೆ ಮಾಡಲಾಗುತ್ತದೆ. ಏಳು ಕೋಟಿ ಜನರ ಸಮೀಕ್ಷೆಯಾದರೆ ಸರ್ಕಾರದಿಂದ ಜನರಿಗೆ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುತ್ತದೆ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯವಾಗಿದೆ. ಬಡವರಿಗೆ ಒಳ್ಳೆಯದನ್ನು ಮಾಡುತ್ತಿದ್ದೇವೆ’ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಆಗಿದೆ ಎಂದು ಹೇಳಿಕೆ ನೀಡಿದ್ದಾರಲ್ಲ ಎನ್ನುವ ಪ್ರಶ್ನೆಗೆ, ‘ಬಿಜೆಪಿಯಲ್ಲಿಯೇ ಅಲ್ಲೋಲ ಕಲ್ಲೋಲವಾಗಿದೆ. ಮೊದಲು ಅವರು ತಮ್ಮ ಪಕ್ಷದ ಆಂತರಿಕ ವಿಚಾರ ನೋಡಿಕೊಳ್ಳಲಿ. ನಮ್ಮ ಪಕ್ಷದಲ್ಲಿ ನವೆಂಬರ್‌ನಲ್ಲಿ ಯಾವುದೇ ಕ್ರಾಂತಿಯಿಲ್ಲ; ಶಾಂತಿ ಮಾತ್ರ ಇದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.