ADVERTISEMENT

ಸಿದ್ದರಾಮಯ್ಯಗೆ ಹಣ ನೀಡಿ ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 21:18 IST
Last Updated 20 ಜುಲೈ 2025, 21:18 IST
<div class="paragraphs"><p>ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ

   

ಗಂಗಾವತಿ: ‘ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಸಿ.ಎಂ ಭಾಷಣ ಮಾಡುವಾಗ ಬಹುತೇಕ ಕುರ್ಚಿಗಳು ಖಾಲಿ ಇದ್ದವು. ಕಾರ್ಯಕರ್ತರಿಗೆ ಹಣ ಕೊಟ್ಟು ಜೈಕಾರ ಹಾಕಿಸಿಕೊಳ್ಳಬೇಕಾದ ದುಃಸ್ಥಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ತಾಲ್ಲೂಕಿನ ಮರಳಿ ಸಮೀಪದಲ್ಲಿ ಭಾನುವಾರ ನಡೆದ ಪಕ್ಷದ ಅವಲೋಕನಾ ಸಭೆ ವೇಳೆ ಮಾತನಾಡಿ, ‘ರಾಜ್ಯ ರಾಜಕಾರಣದಲ್ಲಿ ನವೆಂಬರ್‌ ಅಥವಾ ಅದಕ್ಕೂ ಮೊದಲು ಕ್ರಾಂತಿಯಾಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಸುಳಿವು ನೀಡಿದ್ದಾರೆ’ ಎಂದರು.

ADVERTISEMENT

ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರುವಂತೆ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಸವಾಲು ಹಾಕಿದ್ದಾರೆ. ಮೊದಲು ಪಕ್ಷದ ಶಾಸಕರನ್ನು ಕರೆದು ಅವರ ಪ್ರಶ್ನೆಗಳಿಗೆ ಸಿ.ಎಂ ಉತ್ತರಿಸಲಿ. ನಂತರ ಸವಾಲು ಹಾಕಲಿ’ ಎಂದು ತಿರುಗೇಟು ನೀಡಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.