ಸಿದ್ದರಾಮಯ್ಯ , ಮುಖ್ಯಮಂತ್ರಿ
ಕೊಪ್ಪಳ: ರಾಜ್ಯದ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಬಸಾಪುರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಕಾರ್ಖಾನೆ ವಿಸ್ತರಣೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ಕಾರ್ಖಾನೆಗಾಗಿ ಜಮೀನು ಕಳೆದುಕೊಂಡವರಿಗೆ ಇನ್ನಷ್ಟು ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು.
ಸಮೀಕ್ಷೆ ಮಂಗಳವಾರ ಪೂರ್ಣಗೊಳ್ಳುವ ವಿಶ್ವಾಸವಿದೆ. ಮುಗಿಯದಿದ್ದರೆ ದಿನಾಂಕ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆ ತನಕ ಕಾದು ನೋಡುತ್ತೇವೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಉಳಿದೆಡೆಯೂ ಚುರುಕಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.