
ಅಳವಂಡಿ: ಇಲ್ಲಿನ ಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಜ.30 ರಂದು ಸಂಜೆ ಮಹಾರಥೋತ್ಸವ ನಡೆಯಲಿದೆ.
ಸಿದ್ದೇಶ್ವರ ಮೂರ್ತಿಯನ್ನು ಪಟ್ಟಕ್ಕೆ ಕೂರಿಸುವುದು, ಮಹಾರಥೋತ್ಸವ ಹೊರಹಾಕುವ ಕಾರ್ಯ, ಶಾಂತಮ್ಮ ದೇವಿಗೆ ಉಡಿ ತುಂಬುವ ಕಾರ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ.
ಜಾತ್ರೆಯ ಅಂಗವಾಗಿ ಲಘು ರಥೋತ್ಸವ ಪ್ರಾರಂಭಗೊಂಡಿದ್ದು ಜ.30 ರವರೆಗೂ ನಡೆಯಲಿದೆ.
ಜ.30 ರಂದು ಸಿದ್ದೇಶ್ವರ ಮೂರ್ತಿಗೆ ವಿಶೇಷ ಪೂಜೆ, ಮಹಾ ರುದ್ರಾಭಿಷೇಕ, ಸರ್ವ ಧರ್ಮ ಸಾಮೂಹಿಕ ವಿವಾಹ, ಸಂಜೆ ಸಿದ್ದೇಶ್ವರ ಧ್ವಜ ಲೀಲಾವು, ಶ್ರೀಗಳಿಂದ ಹಾಗೂ ಮುಖ್ಯ ಅತಿಥಿಗಳಿಂದ ಧ್ವಜಾರೋಹಣ ನಂತರ ಮಹಾರಥೋತ್ಸವ ಜರುಗಲಿದೆ.
ಜ.31 ರಂದು ಮಠದ ಪೀಠಾಧಿಪತಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಯ್ಯಾಚಾರ ದೀಕ್ಷಾ ಕಾರ್ಯಕ್ರಮ, ಸಂಜೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಮದ್ದು ಸುಡುವ ಸುಡುವ ಕಾರ್ಯಕ್ರಮ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.