
ಅಳವಂಡಿ: ಗ್ರಾಮದ ಆರಾಧ್ಯದೈವ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಶನಿವಾರ ತೆರೆ ಬಿದ್ದಿತು.
ಬೆಳಿಗ್ಗೆ ಸಿದ್ದೇಶ್ವರ ದೇವರಿಗೆ ಭಕ್ತರು ಅಭಿಷೇಕ, ಅಲಂಕಾರಿಕ ಪೂಜೆ ಸಲ್ಲಿಸಿದರು. ಅಳವಂಡಿ, ಹಲವಾಗಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ದೀರ್ಘ ದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದರು. ದೇವರಿಗೆ ನೈವೇದ್ಯ, ಕಾಯಿ ಮತ್ತು ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು.
ಮಠದ ಪೀಠಾಧಿಪತಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಜಂಗಮ ವಟುಗಳಿಗೆ ಶೀವದೀಕ್ಷೆ ನೀಡಿ ಧರ್ಮೋಪದೇಶ ಬೋಧನೆ ಮಾಡಿದರು. ನಂತರ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.
ನಂತರ ಸಂಜೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವವು ವಿವಿಧ ವಾದ್ಯ ವೈಭವದೊಂದಿಗೆ ಜರುಗಿತು. ಭವ್ಯ ಮೆರವಣಿಗೆಯು ಗ್ರಾಮದ ರಾಜಬೀದಿಯಲ್ಲಿ ಅದ್ಧೂರಿಯಾಗಿ ಸಾಗಿತು. ಅಡ್ಡಪಲ್ಲಕ್ಕಿ ಉತ್ಸವಕ್ಕೆ ಹಲಗೆಯ ನಾದ, ಜಾಂಜ್ ಮೇಳಗಳು ಕಳೆ ತಂದವು.
ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಅಳವಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ಮುದ್ದು ಸುಡುವ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.