ಅರಕೇರಾ (ದೇವದುರ್ಗ): ಪಟ್ಟಣಕ್ಕೆ ಮಂಜೂರಾದ ನೂತನ ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಮತ್ತು ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಸ್ಥಳ ಪರಿಶೀಲನೆ ನಡೆಸಿದರು.
ಪಟ್ಟಣದ ಅರಕೇರಾ- ಸಿರವಾರ ರಾಜ್ಯ ಹೆದ್ದಾರಿ ಸಮೀಪದ ಪಾಲಿಟೆಕ್ನಿಕ್ ಕಾಲೇಜು ಹತ್ತಿರ 7 ಎಕರೆ ಪ್ರದೇಶ ಗುರುತಿಸಲಾಗಿದೆ.
ತಹಶೀಲ್ದಾರ್ ಅಮರೇಶ ಬಿರಾದಾರ, ಪಿಐ ಮಂಜುನಾಥ ಎಸ್., ಕಂದಾಯ ನಿರೀಕ್ಷಕ ಬಸವರಾಜ ಹೂನುರು, ಗ್ರಾಮ ಆಡಳಿತ ಅಧಿಕಾರಿ ಮಲ್ಲಯ್ಯ ನಾಯಕ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.