ADVERTISEMENT

ಹಗೇದಾಳ ಗ್ರಾಮಕ್ಕೆ ಎಸ್ಪಿ ಭೇಟಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 4:22 IST
Last Updated 31 ಅಕ್ಟೋಬರ್ 2020, 4:22 IST
ಕಾರಟಗಿ ತಾಲ್ಲೂಕಿನ ಹಗೇದಾಳ ಗ್ರಾಮಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್ ಶುಕ್ರವಾರ ಭೇಟಿ ನೀಡಿ ಅಲ್ಲಿನ ಜನರಿಗೆ ಧೈರ್ಯ ತುಂಬಿದರು
ಕಾರಟಗಿ ತಾಲ್ಲೂಕಿನ ಹಗೇದಾಳ ಗ್ರಾಮಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್ ಶುಕ್ರವಾರ ಭೇಟಿ ನೀಡಿ ಅಲ್ಲಿನ ಜನರಿಗೆ ಧೈರ್ಯ ತುಂಬಿದರು   

ಕಾರಟಗಿ: ಸಿಗರೇಟ್ ವಿಷಯವಾಗಿ ಎರಡು ಸಮುದಾಯಗಳ ಯುವಕರ ಮಧ್ಯೆ ನಡೆದ ಗಲಾಟೆ ಕಾರಣ ಗ್ರಾಮದಲ್ಲಿ ಅಶಾಂತಿ ವಾತಾವರಣ ಇದೆ. ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೀವ್ರ ಹಲ್ಲೆಗೊಳಗಾದ ಹುಲಿಗೆಮ್ಮ ಅವರ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದರು.‘ಧೈರ್ಯದಿಂದಇರಿ, ನಿಮ್ಮೊಂದಿಗೆ ನಾವಿದ್ದೇವೆ. ನಿಮ್ಮ ಕುಟುಂಬಕ್ಕೆ ನ್ಯಾಯ ದೊರಕುತ್ತದೆ. ವಿಷಯವನ್ನು ಯಾವುದೇ ಕಾರಣಕ್ಕೆ ಬೆಳೆಸಬೇಡಿರಿ. ಕಾನೂನನ್ನು ಕೈಗೆ ತಗೆದುಕೊಳ್ಳಬೇಡಿರಿ’ ಎಂದು ಧೈರ್ಯ ತುಂಬಿದರು.

ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜಿಸಲಾಗಿದೆ.

ADVERTISEMENT

ಕ್ಷುಲಕ ಕಾರಣಕ್ಕೆ ಮಾದಿಗ ಹಾಗೂ ರಡ್ಡಿ ಲಿಂಗಾಯತರ ಸಮುದಾಯದವರ ಮಧ್ಯೆ ತಾಲ್ಲೂಕಿನ ಹಗೇದಾಳ ಗ್ರಾಮದಲ್ಲಿ ನಡೆದ ಮಾರಾಮಾರಿ ಘಟನೆ ಹಿನ್ನೆಲೆಯಲ್ಲಿ ಪರಸ್ಪರ ಎರಡೂ ಸಮುದಾಯದವರ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಗುರುವಾರ ಪೊಲೀಸ್‌ ಇಲಾಖೆಯಿಂದ ಶಾಂತಿಸಭೆ ನಡೆಸಿ, ಶಾಂತಿ ಕಾಪಾಡಲು ಮನವಿ ಮಾಡಲಾಗಿತ್ತು.ಡಿವೈಎಸ್ಪಿ ರುದ್ರೇಶ ಉಜ್ಜನಿಕೊಪ್ಪ, ಸಿಪಿಐ ಉದಯರವಿ ಹಾಗೂ ಪಿಎಸ್ಐ ಅವಿನಾಶ ಕಾಂಬ್ಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.