ಕೊಪ್ಪಳ: ‘ದೈನಂದಿನ ಬದುಕು ಶಿಸ್ತಿನಿಂದ ಕೂಡಿರಬೇಕಾದರೆ ಕ್ರೀಡೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಶಿಸ್ತು ಹಾಗೂ ಹೊಂದಾಣಿಕೆ ಮನೋಭಾವ ಕ್ರೀಡೆ ಕಲಿಸುತ್ತದೆ’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸನಗೌಡ ಪಾಟೀಲ ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ ‘ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಬೇಕು’ ಎಂದರು.
ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ಮೈತ್ರಾದೇವಿ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಬಸವರಾಜ, ಸಮನ್ವಯಾಧಿಕಾರಿ ಪ್ರಕಾಶ ತಗಡಿನಮನಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರಗೌಡˌ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದಯ್ಯ, ಪ್ರಧಾನ ಕಾರ್ಯದರ್ಶಿ ಮೈಲಾರಗೌಡ ಹೊಸಮನಿ, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಾಣೇಶ, ವಿರೂಪಾಕ್ಷಪ್ಪ ಬಾಗೋಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.