ADVERTISEMENT

‘ವಿದ್ಯೆಯಿಂದ ಭವಿಷ್ಯ ಉಜ್ವಲ’

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 12:19 IST
Last Updated 18 ಮಾರ್ಚ್ 2023, 12:19 IST
ಅಳವಂಡಿ ಸಮೀಪದ ಬೋಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕ್ರಯ್ಯ ಮಾತನಾಡಿದರು
ಅಳವಂಡಿ ಸಮೀಪದ ಬೋಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕ್ರಯ್ಯ ಮಾತನಾಡಿದರು   

ಅಳವಂಡಿ: ‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬೆರಳೆಣಿಕೆ ದಿನಗಳು ಬಾಕಿ ಇವೆ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ನಿರಂತರವಾಗಿ ಅಭ್ಯಾಸದಲ್ಲಿ ತೊಡಗಿಕೊಂಡಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕ್ರಯ್ಯ ಹೇಳಿದರು.

ಸಮೀಪದ ಬೋಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸರಸ್ವತಿ ಪೂಜಾ ಕಾರ್ಯಕ್ರಮ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿದರು.

ಇತ್ತಿಚೀನ ದಿನಗಳಲ್ಲಿ ಮಕ್ಕಳು ಮೊಬೈಲ್ ಮತ್ತು ಟಿವಿ ವೀಕ್ಷಣೆಯಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಇದು ಅವರ ಶೈಕ್ಷಣಿಕ ಪ್ರಗತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದೆ. ಷೋಷಕರು ಈ ಕುರಿತು ಎಚ್ಚರವಹಿಸಬೇಕು ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಆವೋಜಿ, ಎಸ್‌ಡಿಎಂಸಿ ಅಧ್ಯಕ್ಷ ನಾಗನಗೌಡ ಪೋಲಿಸ್ ಪಾಟೀಲ, ಟಿಪಿಒ ಬಸವರಾಜ, ಇಸಿಒ ಸಿದ್ದು ಶೆಟ್ಟರ್, ಸಿಆರ್‌ಪಿ ವಿಜಯಕುಮಾರ ಟಿಕಾರೆ, ಮುಖ್ಯಶಿಕ್ಷಕ ದೇವಪ್ಪ ಬಚ್ಚಕ್ಕನವರ, ಪ್ರಮುಖರಾದ ಭೀಮೆಶಪ್ಪ, ಜಗದೀಶ, ಯಮನೂರ, ಹನುಮೇಶ, ಶಿಕ್ಷಕರಾದ ಮೋತೆಪ್ಪ, ನಿಂಗಪ್ಪ, ರವಿಕುಮಾರ, ಶರಣಬಸವ, ಸುಮಂಗಲಾ, ವೀಣಾ, ಪವಿತ್ರಾ, ಬಾಲು ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.