ADVERTISEMENT

ಕೊಪ್ಪಳ: ರಾಜ್ಯಮಟ್ಟದ ಸ್ಪರ್ಧೆ: ನಾಲ್ವರಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 5:58 IST
Last Updated 5 ಫೆಬ್ರುವರಿ 2023, 5:58 IST
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಅತಿಥಿಗಳು
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಅತಿಥಿಗಳು   

ಕೊಪ್ಪಳ: ಎ.ಐ.ಡಿ.ಎಸ್.ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಈಚೆಗೆ ಬೆಂಗಳೂರಿನಲ್ಲಿ ನಡೆಯಿತು.

ಇದರ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ಕೊಪ್ಪಳ ಜಿಲ್ಲೆಯ ನಾಲ್ವರು ಸಾಧಕರಿಗೆ ಬಹುಮಾನ ವಿತರಣೆ ಮಾ ಡಲಾಯಿತು.

ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕೊಪ್ಪಳದ ಸರ್ಕಾರಿ ಮಹಿಳಾ ಕಾಲೇಜಿನ ಅಶ್ವಿನಿ ಕುಮಾರಿ (ಚಿತ್ರಕಲೆ) ಪ್ರಥಮ, ಲಕ್ಷ್ಮಿಭೋವಿ (ಪ್ರಬಂಧ) ದ್ವೀತಿಯ, ಬಾಲಕಿಯರ ಪ್ರೌಢ ಶಾಲೆಯ ಸೃಷ್ಟಿ ಮಂಜುನಾಥ್ (ಪ್ರಬಂಧ), ಗಂಗಾವತಿಯ ಲಿಟಲ್ ಆರ್ಟ್ಸ್ ಶಾಲೆಯ ಕುಮಾರ್ (ರಸಪ್ರಶ್ನೆ) ದ್ವಿತೀಯ ಬಹುಮಾನ ಪಡೆದರು.

ADVERTISEMENT

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಅಧ್ಯಕ್ಷ ಪ್ರೊ.ಎ.ಮುರಿಗೆಪ್ಪ, ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್., ರಾಜ್ಯ ಘಟಕದ ಕಾರ್ಯದರ್ಶಿ ಅಜಯ್ ಕಾಮತ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.