
ಕೊಪ್ಪಳ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಫೆ.28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸನಗೌಡ ಪಾಟೀಲ ಹಲಿಗೇರಿ ಹೇಳಿದರು.
‘ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿ ವಿವಿಧ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳುವರು’ ಎಂದು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ರಾಜ್ಯದಲ್ಲಿ 1.38 ಲಕ್ಷ ಪಿ.ಎಸ್.ಟಿ. ಶಿಕ್ಷಕರಿದ್ದು, ಎಲ್ಲ ಶೈಕ್ಷಣಿಕ ಜಿಲ್ಲೆಗಳಿಂದಲೂ ಶಿಕ್ಷಕರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯಿಂದ ಒಂದು ಸಾವಿರ ಜನ ಪಾಲ್ಗೊಳ್ಳುವರ ನಿರೀಕ್ಷೆಯಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಒಒಡಿ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಹೇಳಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಭೂಮಕ್ಕನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.